ADVERTISEMENT

ದಾವಣಗೆರೆ: ಗಾಂಜಾ ಮಾರಾಟ ಮಾಡುತ್ತಿದ್ದ ಒಬ್ಬನ ಬಂಧನ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2020, 6:49 IST
Last Updated 30 ಆಗಸ್ಟ್ 2020, 6:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಜೋಳದಹಾಳ್ ಗ್ರಾಮದ ಬಳಿ ಅಮ್ಮನ ಗುಡ್ಡದ ಕ್ರಾಸ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಶನಿವಾರ ಬಂಧಿಸಿದ್ಧಾರೆ.

ಹೊಸಳ್ಳಿ ಗ್ರಾಮದ ಹನುಮಂತಪ್ಪ (45) ಬಂಧಿತ.

ಮಾಹಿತಿಯ ಮೇರೆಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಮುಸ್ತಾಕ್ ಅಹಮ್ಮದ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿತನಿಂದ ₹ 3 ಸಾವಿರ ಮೌಲ್ಯದ 315 ಗ್ರಾಂ ಹಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.