ದಾವಣಗೆರೆ: ದೇವರಾಜ ಅರಸು ಬಡಾವಣೆಯ ಹಳೆಯ ಆರ್‌ಟಿಒ ಕಚೇರಿ ಬಳಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.
ಹರಿಹರ ತಾಲ್ಲೂಕು ರಾಜನಹಳ್ಳಿಯ ಎನ್.ಟಿ. ಪ್ರಕಾಶ್ ಅವರ ಪುತ್ರ ಎನ್.ಪಿ.ಕುಮಾರ (26) ಕೊಲೆಯಾದವರು. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು ಜಾಲಿನಗರದಲ್ಲಿರುವ ತನ್ನ ಅಜ್ಜಿಯ ಮನೆಯಲ್ಲಿ ವಾಸಿಸುತ್ತಿದ್ದರು. ಬುಧವಾರ ಮಧ್ಯಾಹ್ನ 12.30 ವೇಳೆ ಕೊಲೆಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಡಾವಣೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.