ADVERTISEMENT

ಕಡರನಾಯ್ಕನಹಳ್ಳಿ | ಮಣ್ಣೆತ್ತಿನ ಅಮಾವಾಸ್ಯೆ; ಅಜ್ಜಯ್ಯನ ದರ್ಶನಕ್ಕೆ ಭಕ್ತರ ದಂಡು

​ಪ್ರಜಾವಾಣಿ ವಾರ್ತೆ
Published 25 ಜೂನ್ 2025, 16:12 IST
Last Updated 25 ಜೂನ್ 2025, 16:12 IST
ಕಡರನಾಯ್ಕನಹಳ್ಳಿ ಸಮೀಪದ ಉಕ್ಕಡಗಾತ್ರಿ ಗ್ರಾಮದಲ್ಲಿ ಸ್ನಾನಘಟ್ಟ ಮತ್ತು ಅಂಗಡಿಗಳು ಜಲಾವೃತಗೊಂಡಿವೆ
ಕಡರನಾಯ್ಕನಹಳ್ಳಿ ಸಮೀಪದ ಉಕ್ಕಡಗಾತ್ರಿ ಗ್ರಾಮದಲ್ಲಿ ಸ್ನಾನಘಟ್ಟ ಮತ್ತು ಅಂಗಡಿಗಳು ಜಲಾವೃತಗೊಂಡಿವೆ   

ಕಡರನಾಯ್ಕನಹಳ್ಳಿ: ಸಮೀಪದ ಉಕ್ಕಡಗಾತ್ರಿ ಅಜ್ಜಯ್ಯನ ದರ್ಶನಕ್ಕೆ ಮಣ್ಣೆತ್ತಿನ ಅಮಾವಾಸ್ಯೆ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.

ನಿರಂತರ ಮಳೆ ಮತ್ತು ತುಂಗಾ ಜಲಾಶಯದಿಂದ ನೀರು ಹರಿಯುತ್ತಿರುವುದರಿಂದ ಸ್ನಾನಘಟ್ಟ ಮತ್ತು ಅಂಗಡಿಗಳು ಜಲಾವೃತವಾಗಿವೆ. ಭಕ್ತರು ದಡದಲ್ಲಿ ಸ್ನಾನ ಮಾಡಿ ಅಜ್ಜಯ್ಯನ ದರ್ಶನ ಪಡೆದರು.

ಅಜ್ಜಯ್ಯನಿಗೆ ವಿಶೇಷ ಪೂಜೆ ಮತ್ತು ಅಲಂಕಾರ ಮಾಡಲಾಗಿತ್ತು. ಭಕ್ತರ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ಗಳ ವ್ಯವಸ್ಥೆ ಮಾಡಲಾಗಿತ್ತು. ತುಂಗಭದ್ರಾ ನದಿಯಲ್ಲಿ ಹೆಚ್ಚಿನ ನೀರಿನ ಹರಿವು ಇರುವುದರಿಂದ ಧ್ವನಿವರ್ಧಕಗಳ ಮೂಲಕ ಸೂಚನೆ ನೀಡಲಾಯಿತು.

ADVERTISEMENT

ದೇವಸ್ಥಾನ ಸಮಿತಿಯಿಂದ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.