ಸಾವು
(ಪ್ರಾತಿನಿಧಿಕ ಚಿತ್ರ)
ಚನ್ನಗಿರಿ: ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ವ್ಯಕ್ತಿಯೊಬ್ಬರಿಗೆ ಮಾರುತಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೋಮವಾರ ತಡ ರಾತ್ರಿ ನಡೆದಿದೆ.
ಪಟ್ಟಣದ ಮರಾಠ ಬೀದಿ ವಾಸಿ ಕುಮಾರ್ (40) ಮೃತಪಟ್ಟ ವ್ಯಕ್ತಿ. ಈತ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಪ್ರಥಮ ದರ್ಜೆ ಕಾಲೇಜಿನ ಬಳಿ ಇರುವ ಬಸ್ ತಂಗುದಾಣದಲ್ಲಿ ರಾತ್ರಿ ವೇಳೆ ಹೋಗಿ ಮಲಗಿಕೊಳ್ಳುತ್ತಿದ್ದ.
ಸೋಮವಾರ ರಾತ್ರಿ ಸ್ಥಳಕ್ಕೆ ಮಲಗಲು ಹೋಗುವ ವೇಳೆ ಹೆದ್ದಾರಿಯಲ್ಲಿ ವೇಗವಾಗಿ ಬಂದ ಮಾರುತಿ ವ್ಯಾನ್ ಈತನಿಗೆ ಡಿಕ್ಕಿ ಹೊಡೆದಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.