ಚನ್ನಗಿರಿ: ತಾಲ್ಲೂಕಿನ ಮಾವಿನಕಟ್ಟೆ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಯೊಂದರ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ ಘಟನೆ ಭಾನುವಾರ ನಡೆದಿದೆ.
ನಾಗನಾಯ್ಕ ಎಂಬುವವರ ಕಿರಾಣಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಚನ್ನಗಿರಿ ಅಬಕಾರಿ ಇಲಾಖೆ ಸಿಪಿಐ ಬಿ. ಶ್ವೇತಾ ಹಾಗೂ ತಂಡ ಭಾನುವಾರ ದಾಳಿ ನಡೆಸಿ ಮದ್ಯ ವಶಪಡಿಸಿಕೊಂಡಿದೆ. ಆರೋಪಿ ನಾಗನಾಯ್ಕ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.