ಚನ್ನಗಿರಿ: ತಾಲ್ಲೂಕಿನ ಮಾವಿನಕಟ್ಟೆ ಗ್ರಾಮದಲ್ಲಿ ಚಿತ್ರದುರ್ಗ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 13 ಹಾದು ಹೋಗಿದ್ದು, ಸುತ್ತಲಿನ ಹಳ್ಳಿಗಳ ಜನರು ಇಲ್ಲಿಂದ ದೂರದ ಊರುಗಳಿಗೆ ಬಸ್‌ಗಳಲ್ಲಿ ಪ್ರಯಾಣ ಬೆಳೆಸುತ್ತಾರೆ.
ದಿನವೂ ಅಂದಾಜು ಎರಡು ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಈ ಗ್ರಾಮಕ್ಕೆ ಬಂದು ಬಸ್‌ಗಳಲ್ಲಿ ತೆರಳುತ್ತಾರೆ. ಹಾಗಾಗಿ ಗ್ರಾಮದಲ್ಲಿ ಬಸ್ ತಂಗುದಾಣದ ಅವಶ್ಯಕತೆ ತುಂಬಾ ಇದೆ.
ಶಿವಮೊಗ್ಗ ಕಡೆಗೆ ಹೋಗುವ ಜನರಿಗೆ ಬಸ್ ತಂಗುದಾಣ ಇಲ್ಲದೇ ಇರುವುದರಿಂದ ಹೆದ್ದಾರಿ ಬದಿಯಲ್ಲಿಯೇ ಬಿಸಿಲು, ಮಳೆ ಲೆಕ್ಕಿಸದೇ ನಿಂತು ಬಸ್‌ಗೆ ಕಾಯುವ ಅನಿವಾರ್ಯತೆ ಇದೆ. ಸಂಬಂಧಪಟ್ಟ ಜನಪ್ರತಿನಿಧಿಗಳು ಗ್ರಾಮಕ್ಕೆ ಒಂದು ಬಸ್ ತಂಗುದಾಣ ನಿರ್ಮಿಸಲು ಮುಂದಾಗಬೇಕಾಗಿದೆ ಎನ್ನುತ್ತಾರೆ ಪ್ರಯಾಣಿಕರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.