ಮಾಯಕೊಂಡ: ‘ಆದ್ಯತೆ ಮೇರೆಗೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಮಾಡಲಾಗುವುದು. ಕಾಮಗಾರಿ ಗುಣಮಟ್ಟದ ಬಗ್ಗೆ ಸ್ಥಳೀಯರಿಗೂ ಕಾಳಜಿ ಇರಬೇಕು’ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಸಲಹೆ ನೀಡಿದರು.
ಸಮೀಪದ ಬಾಡ ಗ್ರಾಮದಲ್ಲಿ ಬುಧವಾರ ₹ 1 ಕೋಟಿ ವೆಚ್ಚದ ಬಾಡ– ಕಬ್ಬೂರು ಗ್ರಾಮಗಳನ್ನು ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಕೊಡಬೇಕು. ಅಧಿಕಾರಿಗಳು ಗುಣಮಟ್ಟದಲ್ಲಿ ರಾಜಿ ಇಲ್ಲದಂತೆ ಕೆಲಸ ಪಡೆಯಬೇಕು. ಗ್ರಾಮಸ್ಥರೂ ಕಾಮಗಾರಿ ಬಗ್ಗೆ ನಿಗಾ ವಹಿಸಬೇಕು’ ಎಂದು ಕಿವಿಮಾತು ಹೇಳಿದರು.
‘ಕ್ಷೇತ್ರದಲ್ಲಿ ಸಾರ್ವಜನಿಕರ ಅವಶ್ಯಕತೆಗೆ ಅನುಗುಣವಾಗಿ ಪ್ರತಿ ಗ್ರಾಮದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.
ಒಮ್ಮೆ ಮಾಡಿದ ಕೆಲಸಗಳು ಶಾಶ್ವತವಾಗಿ ಉಳಿಯಬೇಕು. ಆಗ ಸಾರ್ವಜನಿಕ ಕ್ಷೇತ್ರದಲ್ಲಿ ಉತ್ತಮ ಗೌರವ ಸಿಗುತ್ತದೆ’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಿಡಿಒ ಶಾಂತಮ್ಮ, ಮುಖಂಡರಾದ ರುದ್ರಸ್ವಾಮಿ, ಸೈಫುಲ್ಲಾ, ನಾಗಣ್ಣ, ಎಂ.ಡಿ. ಸುರೇಶ್, ಕುಮಾರ್, ದಿನೇಶ್, ಶಿವಣ್ಣ ಹಾಗೂ ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.