ADVERTISEMENT

ದಾವಣಗೆರೆ | ಔಷಧೀಯ ಸಸ್ಯ ಸಂರಕ್ಷಿಸಿ: ವಡ್ನಾಳ್ ಜಗದೀಶ್

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2026, 6:54 IST
Last Updated 8 ಫೆಬ್ರುವರಿ 2026, 6:54 IST
ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಭೆಯಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷ ವಡ್ನಾಳ್ ಜಗದೀಶ್ ಮಾತನಾಡಿದರು
ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಭೆಯಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷ ವಡ್ನಾಳ್ ಜಗದೀಶ್ ಮಾತನಾಡಿದರು   

ದಾವಣಗೆರೆ: ಜೈವಿಕ ಸಂಪನ್ಮೂಲಗಳನ್ನು ಲಾಭಕ್ಕೆ ಅಥವಾ ವ್ಯಾಪಾರಕ್ಕೆ ಬಳಸುವವರು ನಿಗದಿತ ಶುಲ್ಕವನ್ನು ಪಾವತಿಸಬೇಕು ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷ ವಡ್ನಾಳ್ ಜಗದೀಶ್ ಹೇಳಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜೀವವೈವಿಧ್ಯ ನಿರ್ವಹಣಾ ಸಮಿತಿಗಳ ಕುರಿತು ಶುಕ್ರವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜೀವವೈವಿಧ್ಯ ನಿರ್ವಹಣಾ ಸಮಿತಿಗಳು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಚನೆಯಾಗಬೇಕು. ನಾಟಿ ವೈದ್ಯರು ವ್ಯಾಣಿಜ್ಯ ಉದ್ದೇಶ, ಆರ್ಥಿಕ ಲಾಭಕ್ಕಾಗಿ ಜೈವಿಕ ಸಂಪನ್ಮೂಲಗಳನ್ನು ಬಳಸುತ್ತಿದ್ದರೆ ಶುಲ್ಕವನ್ನು ಪಾವತಿಸಬೇಕಾಗಿರುತ್ತದೆ. ವ್ಯಾಪಾರದ ಉದ್ದೇಶ ಇಲ್ಲವೆಂದಾದರೆ ಶುಲ್ಕವನ್ನು ಪಾವತಿಸುವಂತಿಲ್ಲ’ ಎಂದರು.

ADVERTISEMENT

‘ಅಳಿವಿನಂಚಿನಲ್ಲಿರುವ, ಅತಿ ವಿರಳ ಸಂಖ್ಯೆಯ ಔಷಧೀಯ ಸಸ್ಯಗಳು ಬೆಳೆಯುವ ಪ್ರದೇಶವನ್ನು ಪಾರಂಪರಿಕ ತಾಣವೆಂದು ಘೋಷಿಸಿ ಸಂರಕ್ಷಿಸಬೇಕು. ಪರಿಸರಕ್ಕೆ ಹಾನಿಯುಂಟು ಮಾಡುವ ಕೈಗಾರಿಕೆ, ಕಾರ್ಖಾನೆಗಳನ್ನು ನಿಯಂತ್ರಿಸುವ ಅಧಿಕಾರ ಸಮಿತಿಗೆ ಇದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಮತಾ ಹೊಸಗೌಡರ್‌, ಮಂಡಳಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋವರ್ಧನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಸಂಶೋಧನಾ ಸಹಾಯಕ ಪ್ರೀತಂ ಎಸ್., ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ನವೀನ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.