ADVERTISEMENT

ದೇಶ ವಿರೋಧಿ ಹೇಳಿಕೆ | ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2020, 9:05 IST
Last Updated 22 ಫೆಬ್ರುವರಿ 2020, 9:05 IST
   

ದಾವಣಗೆರೆ: ದೇಶ ವಿರೋಧದ ಹೇಳಿಕೆಯ ಹಿಂದೆ ದೊಡ್ಡ ಷಡ್ಯಂತ್ರವೇ ದೇಶದಲ್ಲಿ ನಡೆಯುತ್ತಿದೆ. ಅದೇ ರೀತಿ ರಾಜ್ಯದಲ್ಲಿ ಸಹ ಇದು ಕೆಲಸ ಮಾಡುತ್ತಿದೆ. ಈ ಕಾರಣಕ್ಕಾಗಿಯೇ ನಾಳೆ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.

ದೇಶದ್ರೋಹ ಹೇಳಿಕೆ ನೀಡಿದ ಅಮೂಲ್ಯ ಪೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾಳೆ. ಇದಕ್ಕೆ ಕುಮ್ಮಕ್ಕು ನೀಡುವುದು. ಜೊತೆಗೆ ಕಾನೂನು ನೆರವು ನೀಡುವುದು ಸಹ ನಡೆಯುತ್ತಿದೆ. ಇದರ ಹಿಂದೆ ಕೆಲ ವ್ಯಕ್ತಿಗಳು ಹಾಗೂ ಸಂಘಟನೆಗಳು ಸಹ ಇವೆ. ಇದರ ಬಗ್ಗೆ ನಾಳೆ ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಇಂತಹ ಕೃತ್ಯದಲ್ಲಿ ಭಾಗಿಯಾದವರನ್ನು ಬೇರು ಸಹಿತ ಕಿತ್ತುಹಾಕಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.

ಕಲಬುರ್ಗಿ ಘಟನೆ ಬಗ್ಗೆ ಪ್ರಕರಣ

ADVERTISEMENT

ಕಲಬುರ್ಗಿಯಲ್ಲಿ‌ನಡೆದ ಸಭೆಯೊಂದರಲ್ಲಿ ಮಹಾರಾಷ್ಟ್ರದ ಓರ್ವ ಮಾಜಿ ಶಾಸಕರು‌ ಮಾತನಾಡಿದ್ದಾರೆ. ಇದು ಕೋಮು ಭಾವನೆಗೆ ಧಕ್ಕೆ ತರುವ ರೀತಿಯಲ್ಲಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಹೇಳಿದರು.

ಸ್ಪೀಕರ್ ವ್ಯಾಪ್ತಿಗೆ

ಶಾಸಕರ ಭವನಕ್ಕೆ ಮಾಧ್ಯಮದವರಿಗೆ ಪ್ರವೇಶ ನಿಷೇಧಿಸುವುದು ಸ್ಪೀಕರ್ ವ್ಯಾಪ್ತಿಯಲ್ಲಿ ಬರುತ್ತದೆ. ಈ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.