ADVERTISEMENT

ಚನ್ನಗಿರಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2025, 15:31 IST
Last Updated 21 ಫೆಬ್ರುವರಿ 2025, 15:31 IST
ಚನ್ನಗಿರಿಯಲ್ಲಿ ರೈತ ಸಂಘದ ಸದಸ್ಯರು ತಹಶೀಲ್ದಾರ್ ಕೆ.ಆರ್. ರುಕ್ಮಿಣಿಬಾಯಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು
ಚನ್ನಗಿರಿಯಲ್ಲಿ ರೈತ ಸಂಘದ ಸದಸ್ಯರು ತಹಶೀಲ್ದಾರ್ ಕೆ.ಆರ್. ರುಕ್ಮಿಣಿಬಾಯಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು   

ಚನ್ನಗಿರಿ: ‘ಮೈಕ್ರೊ ಫೈನಾನ್ಸ್ ಕಂಪನಿಗಳ ಸಿಬ್ಬಂದಿ ಸಾಲ ವಸೂಲಾತಿ ವೇಳೆ ನೀಡುತ್ತಿರುವ ಕಿರುಕುಳ ಖಂಡಿಸಿ ರೈತ ಸಂಘದ (ಹುಚ್ಚವನಹಳ್ಳಿ ಮಂಜುನಾಥ್ ಬಣ) ಸದಸ್ಯರು ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನಲ್ಲಿ 30ಕ್ಕೂ ಹೆಚ್ಚು ಮೈಕ್ರೊ ಫೈನಾನ್ಸ್ ಕಂಪೆನಿಗಳಿದ್ದು, ಕೆಲವು ಕಂಪನಿಗಳ ಸಿಬ್ಬಂದಿ ಬಲವಂತವಾಗಿ ಸಾಲ ವಸೂಲಾತಿ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಾಗಿ ತಹಶೀಲ್ದಾರ್ ಕಚೇರಿಗೆ ಆಗಮಿಸಿತು. ತಹಶೀಲ್ದಾರ್ ಕೆ.ಆರ್. ರುಕ್ಮಿಣಿಬಾಯಿ ಅವರಿಗೆ ಮನವಿ ಸಲ್ಲಿಸಿದರು.

ADVERTISEMENT

ಮುಖಂಡರಾದ ಪೀರ್ ನಾಯ್ಕ, ಆಂಜನೇಯ, ಗಂಡುಗಲಿ, ದಾರುಸರ್ ಸುರೇಶ್, ಉಮೇಶ್, ಮೂಡಲಗಿರಿಯಪ್ಪ, ಕುಮಾರ್, ಬಸವರಾಜ್, ಶರಣಮ್ಮ, ಶಂಕರನಾಯ್ಕ, ಜಯಮ್ಮ, ರಾಮಚಂದ್ರ, ವೆಂಕಟೇಶ್, ಜ್ಞಾನೇಶ್ ಕುಮಾರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.