ದಾವಣಗೆರೆ: ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಾಂಸಾಹಾರ ಪೂರೈಕೆಯ ಆಲೋಚನೆ ಇತ್ತು. ಆದರೆ, ಇದುವರೆಗೆ ಕಾರ್ಯರೂಪಕ್ಕೆ ತರಲು ಸಾಧ್ಯವಾಗಿಲ್ಲ. ಸದ್ಯ ಮೊಟ್ಟೆ ಪೂರೈಸುವ ಪ್ರಸ್ತಾವ ಸರ್ಕಾರದ ಎದುರು ಇದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದರು.
ಬಡವರಿಗೆ ಆಹಾರದಲ್ಲಿ ಪೋಷಕಾಂಶ ದೊರೆಯಬೇಕು. ಅಂತೆಯೇ ಮಾಂಸಾಹಾರ ಪೂರೈಸುವಂತೆ ಬೇಡಿಕೆ ಇದೆ ಎಂದು ನಗರದಲ್ಲಿರುವ ಇಂದಿರಾ ಕ್ಯಾಂಟೀನ್ ಪರಿಶೀಲಿಸಿದ ನಂತರ ಅವರು ಸುದ್ದಿಗಾರರಿಗೆ ತಿಳಿಸಿದರು.
ಇಂದಿರಾ ಕ್ಯಾಂಟೀನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿ 186 ಹೊಸ ಕ್ಯಾಂಟೀನ್ ಆರಂಭಿಸಲು ಅನುಮೋದನೆ ನೀಡಲಾಗಿದೆ. ಈ ಪೈಕಿ 100ಕ್ಕೂ ಅಧಿಕ ಕ್ಯಾಂಟೀನ್ ಪ್ರಾರಂಭವಾಗಿವೆ. ಉಳಿದ ಕ್ಯಾಂಟೀನ್‌ಗಳು ಶೀಘ್ರದಲ್ಲೇ ಕಾರ್ಯಾರಂಭ ಆಗಲಿವೆ. ಇದರಿಂದ ಜನರಿಗೆ ಅನುಕೂಲವಾಗಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.