ADVERTISEMENT

ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಬೈರತಿ

​ಪ್ರಜಾವಾಣಿ ವಾರ್ತೆ
Published 9 ಮೇ 2021, 5:22 IST
Last Updated 9 ಮೇ 2021, 5:22 IST
ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅವರು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಂದ ಆಮ್ಲಜನಕ ಘಟಕದ ಮಾಹಿತಿ ಪಡೆದರು
ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅವರು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಂದ ಆಮ್ಲಜನಕ ಘಟಕದ ಮಾಹಿತಿ ಪಡೆದರು   

ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅವರು ಜಿಲ್ಲಾ ಚಿಗಟೇರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್‌ ಚಿಕಿತ್ಸೆ ವ್ಯವಸ್ಥೆಯನ್ನು ಪರಿಶೀಲಿಸಿದರು.

ಲಿಕ್ವಿಡ್‌ ಮೆಡಿಕಲ್‌ ಆಕ್ಸಿಜನ್‌ ಪ್ಲಾಂಟ್‌, ಜಂಬೋ ಸಿಲಿಂಡರ್‌ ಪ್ಲಾಂಟ್‌ ವೀಕ್ಷಿಸಿದ ಸಚಿವರು ಆಮ್ಲಜನಕ ಕೊರತೆಯಾಗದಂತೆ ಎಚ್ಚರವಹಿಸಿ ಕಾರ್ಯನಿರ್ವಹಿಸಲು ಸೂಚಿಸಿದರು.

ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ, ಡಿಎಚ್‌ಒ ಡಾ. ನಾಗರಾಜ್‌, ಡಿಎಸ್‌ ಡಾ. ಜಯಪ್ರಕಾಶ್‌, ಡಿಎಸ್‌ಒ ಡಾ. ರಾಘವನ್‌ ಅವರೂ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.