
ಪ್ರಜಾವಾಣಿ ವಾರ್ತೆ
ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಗರದ ಹಳೇ ಕುಂದವಾಡದ ಬಳಿ ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಪ್ರಶಾಂತ್ ಶೆಟ್ಟರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.
ದಾವಣಗೆರೆಯಿಂದ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದಾಗ ಲಾರಿ ಹಾಗೂ ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಪ್ರಶಾಂತ್ ಶೆಟ್ಟರ್ ಅವರ ಪತ್ನಿ ಅಂಚಲ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಹೈಟೆಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ಪಿಎಸ್‌ಐ ಕಿರಣ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.