ADVERTISEMENT

ಭದ್ರಾ ನಾಲೆಗಳ ದುರಸ್ತಿಗೆ ಸಚಿವರ ಭರವಸೆ: ಸಿದ್ದೇಶ್ವರ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2022, 6:32 IST
Last Updated 8 ಅಕ್ಟೋಬರ್ 2022, 6:32 IST
ಹಾಳಾದ ಭದ್ರಾ ನಾಲೆಗಳ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಬೆಂಗಳೂರಿನಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಿದರು. ಮಾಜಿ ಶಾಸಕ ಬಿ.ಪಿ. ಹರೀಶ್ ಇದ್ದರು.
ಹಾಳಾದ ಭದ್ರಾ ನಾಲೆಗಳ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಬೆಂಗಳೂರಿನಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಿದರು. ಮಾಜಿ ಶಾಸಕ ಬಿ.ಪಿ. ಹರೀಶ್ ಇದ್ದರು.   

ದಾವಣಗೆರೆ:ಈಚೆಗೆ ಸುರಿದ ಮಳೆಯಿಂದ ಹಾಳಾಗಿರುವ ಮಾಯಕೊಂಡ ವಿಧಾನಸಭಾ ಕ್ಷೇತ್ರದ ನಲ್ಕುಂದ ಗ್ರಾಮದ ಬಳಿ ಭದ್ರಾ ನಾಲೆಯ ದುರಸ್ತಿಗೆಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಲಾಗಿದ್ದು, ದುರಸ್ತಿಗೆ ಮಾಡುವ ಭರವಸೆ ನೀಡಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಸದರು ಜಿಲ್ಲೆಯಲ್ಲಿ ಹಾಳಾದ ನಾಲೆಗಳ ಬಗ್ಗೆ ತಿಳಿಸಿ, ದುರಸ್ತಿ ಬಗ್ಗೆ ಮನವರಿಕೆ ಮಾಡಿದರು.

ಹರಿಹರ ತಾಲ್ಲೂಕಿನ ದೇವರಬೆಳಕೆರೆ ಡ್ಯಾಂನ ಪಿಕಪ್ ನಾಲೆಗಳೂ ಹಾಳಾಗಿ ರೈತರಿಗೆ ತೊಂದರೆಯಾಗಿದೆ. ಈ ಎರಡೂ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಸಂಸದರು ಕಾರಜೋಳ ಅವರಿಗೆ ಮನವಿ ಸಲ್ಲಿಸಿದರು.

ADVERTISEMENT

ಮನವಿ ಸ್ವೀಕರಿಸಿದ ಗೋವಿಂದ ಕಾರಜೋಳ ಶೀಘ್ರ ಪರಿಹಾರ ಒದಗಿಸುವ ಭರವಸೆ ನೀಡಿದರು.

ಹರಿಹರದ ಮಾಜಿ ಶಾಸಕ ಬಿ.ಪಿ. ಹರೀಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.