ADVERTISEMENT

ದಾವಣಗೆರೆಯಲ್ಲಿ ಲಾಕ್‌ಡೌನ್‌ಗೆ ಮಿಶ್ರ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 6:35 IST
Last Updated 12 ಜುಲೈ 2020, 6:35 IST
ದಾವಣಗೆರೆಯ ಅಶೋಕ ರಸ್ತೆಯಲ್ಲಿ ಅಂಗಡಿಗಳು ಬಂದ್ ಆಗಿರುವ ದೃಶ್ಯ
ದಾವಣಗೆರೆಯ ಅಶೋಕ ರಸ್ತೆಯಲ್ಲಿ ಅಂಗಡಿಗಳು ಬಂದ್ ಆಗಿರುವ ದೃಶ್ಯ   
""

ದಾವಣಗೆರೆ: ನಗರದಲ್ಲಿ ಭಾನುವಾರದ ಲಾಕ್‌ಡೌನ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿಗಳು ಬಂದ್ ಆಗಿದ್ದವು. ಆದರೆ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವವರ ಸಂಖ್ಯೆ ಹೆಚ್ಚಾಗಿತ್ತು. ದ್ವಿಚಕ್ರ ವಾಹನ ಸವಾರರಿಗೆ ಕಡಿವಾಣ ಹಾಕಲು ಪೊಲೀಸರು ನಗರದ ಪ್ರಮುಖ ವೃತ್ತದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿದರು.

ಅನಗತ್ಯವಾಗಿ ಸಂಚರಿಸುವವರಿಗೆ ಪೊಲೀಸರು ಬುದ್ಧಿವಾದ ಹೇಳಿದರು. ಮಾಸ್ಕ್ ಹಾಕದವರಿಗೆ ದಂಡವನ್ನು ವಿಧಿಸಿದರು.

ಹಾಲು, ಕಿರಾಣಿ ಅಂಗಡಿ, ಮೆಡಿಕಲ್ ಶಾಪ್, ಹಣ್ಣಿನ ಅಂಗಡಿ, ಆಸ್ಪತ್ರೆ ಹಾಗೂ ಮಾಂಸದಂಗಡಿ ತೆರೆದಿದ್ದವು. ವಿನೋಬನಗರ, ಡಾಂಗೆ ಪಾರ್ಕ್ ಮುಂತಾದ ಕಡೆಗಳಲ್ಲಿ ಬೆಳಿಗ್ಗೆಯೇ ಜನರು ತರಕಾರಿ ಹಾಗೂ ಮಾಂಸವನ್ನು ಖರೀದಿಸಿದರು.ಮದ್ಯದ ಅಂಗಡಿಗಳು ಬಂದ್ ಆಗಿದ್ದವು. ಕೆಎಸ್ಆರ್‌ಟಿಸಿ, ಖಾಸಗಿ ಬಸ್‌ಗಳು, ಕ್ಯಾಬ್‌ಗಳು ಸಂಚರಿಸುತ್ತಿಲ್ಲ. ಅಲ್ಲಲ್ಲಿ ಆಟೊಗಳು ಸಂಚರಿಸಿದವು.

ADVERTISEMENT
ದಾವಣಗೆರೆಯ ವಿನೋಬ ನಗರದಲ್ಲಿ ಮಾಂಸ ಖರೀದಿಗಾಗಿ ಮುಗಿಬಿದ್ದ ಜನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.