ADVERTISEMENT

ಗ್ರಾಮಗಳ ಸ್ವಚ್ಛತೆಗೆ ಸಾರ್ವಜನಿಕರು ಗ್ರಾ.ಪಂ.ಗೆ ಕೈಜೋಡಿಸಬೇಕು: ಶಾಸಕ ಶಾಂತನಗೌಡ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2025, 6:32 IST
Last Updated 29 ಡಿಸೆಂಬರ್ 2025, 6:32 IST
ನ್ಯಾಮತಿ ತಾಲ್ಲೂಕು ಕುಂಕುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಸ್ವಚ್ಛ ಸಂಕೀರ್ಣದ ಉದ್ಘಾಟನೆಯನ್ನು ಶಾಸಕ ಡಿ.ಜಿ.ಶಾಂತನಗೌಡ ಶನಿವಾರ ನೆರವೇರಿಸಿದರು. 
ನ್ಯಾಮತಿ ತಾಲ್ಲೂಕು ಕುಂಕುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಸ್ವಚ್ಛ ಸಂಕೀರ್ಣದ ಉದ್ಘಾಟನೆಯನ್ನು ಶಾಸಕ ಡಿ.ಜಿ.ಶಾಂತನಗೌಡ ಶನಿವಾರ ನೆರವೇರಿಸಿದರು.    

ಕುಂಕುವ (ನ್ಯಾಮತಿ): ಗ್ರಾಮಗಳ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಸಾರ್ವಜನಿಕರು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸಹಕಾರ ನೀಡಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

ನ್ಯಾಮತಿ ತಾಲ್ಲೂಕು ಕುಂಕುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಿರುವ ಸ್ವಚ್ಛ ಸಂಕೀರ್ಣದ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಂ.ಬಸವರಾಜ, ಸದಸ್ಯರಾದ ಜಿ.ಪಿ.ಚಂದನ್, ಸಿ.ಆರ್.ಚಂದ್ರಮ್ಮ, ಶ್ರುತಿ, ಕವಿತಾ, ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಕವಿತಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಜಯಪ್ಪ, ಕಾರ್ಯದರ್ಶಿ ಶಾಂತಕುಮಾರಯ್ಯ ಮತ್ತು ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.