ಚನ್ನಗಿರಿ: ತಾಲ್ಲೂಕಿನ ದೇವರಹಳ್ಳಿ ಗ್ರಾಮದ ಬಳಿ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಬೈಕ್‌ವೊಂದು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರರು ತೀವ್ರವಾಗಿ ಗಾಯಗೊಂಡು ನರಳಾಡುತ್ತಿದ್ದವರಿಗೆ ಚಿಕಿತ್ಸೆ ಕೊಡಿಸಲು ಶಾಸಕ ಮಾಡಾಳ್ ನೆರವಾದರು.
ಬೈಕ್ ಸವಾರರು ಹರಪನಹಳ್ಳಿಯವರು. ಅಪಘಾತದಿಂದಾಗಿ ಬೈಕ್ ಸವಾರ ಮತ್ತು ಹಿಂಬದಿ ಸವಾರ ರಸ್ತೆ ಬದಿಯಲ್ಲಿ ನರಳುತ್ತಾ ಬಿದ್ದಿದ್ದರು. ಈ ಸಮಯದಲ್ಲಿ ಸಂತೇಬೆನ್ನೂರು ಕಡೆಯಿಂದ ಕಾರಿನಲ್ಲಿ ಬರುತ್ತಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕಾರನ್ನು ನಿಲ್ಲಿಸಿ, ಗಾಯಾಳುಗಳ ಬಳಿ ತೆರಳಿ ತಕ್ಷಣ ದೇವರಹಳ್ಳಿಯಿಂದ ವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಿದರು. ನಂತರ ಆಂಬುಲೆನ್ಸ್ ತರಿಸಿಕೊಂಡು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಾಸಕರ ಈ ಕಾರ್ಯಕ್ಕೆ ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.