ADVERTISEMENT

ಹುಬ್ಬಳ್ಳಿ ಪ್ರಕರಣ: ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿ -ಸತೀಶ್‌ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2022, 4:12 IST
Last Updated 19 ಏಪ್ರಿಲ್ 2022, 4:12 IST
ಸತೀಶ್‌ ಜಾರಕಿಹೊಳಿ
ಸತೀಶ್‌ ಜಾರಕಿಹೊಳಿ   

ದಾವಣಗೆರೆ: ಹುಬ್ಬಳ್ಳಿಯಲ್ಲಿ ನಡೆದ ಘಟನೆ ಬೇಸರದ ವಿಚಾರ. ತಪ್ಪಿತಸ್ಥರ ಮೇಲೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ಕಠಿಣ ಕ್ರಮ ಕೈಗೊಂಡರೆ ಮಾತ್ರ ಮುಂದೆ ಇಂಥ ಘಟನೆ ಮರುಕಳಿಸುವುದನ್ನು ತಡೆಯಲು ಸಾಧ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರರ ಜತೆಗೆ ಅವರು ಮಾತನಾಡಿದರು.

ಯುಪಿಎ ಸರ್ಕಾರ ಇದ್ದಾಗ ಒಂದು ರಫೇಲ್ ಯುದ್ದ ವಿಮಾನ ಖರೀದಿಗೆ ₹ 800 ಕೋಟಿ ನಿಗದಿ ಮಾಡಿತ್ತು. ನರೇಂದ್ರ ಮೋದಿ ಸರ್ಕಾರ ಅದನ್ನು ₹ 1600 ಕೋಟಿ ಕೊಟ್ಟು ಖರೀದಿ ಮಾಡುವ ಮೂಲಕ ಭ್ರಷ್ಟಾಚಾರ ಎಸಗಿತ್ತು. ರಾಜ್ಯ ಗುತ್ತಿಗೆದಾರ ಸಂಘ ರಾಜ್ಯ ಸರ್ಕಾರದ ಹಲವು ಸಚಿವರ ಶೇ 40 ಕಮಿಷನ್‌ ವಿಚಾರವಾಗಿ ‍ಪ್ರಧಾನಿಗೆ ಪತ್ರ ಬರೆದರೂ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಕೆ.ಎಸ್‌. ಈಶ್ವರಪ್ಪ ಶೇ 40 ಕಮಿಷನ್‌ ಪಡೆದಿರುವುದು ಕೂಡ ಮೋದಿಗೆ ಯಾವ ಲೆಕ್ಕವೂ ಅಲ್ಲ ಎಂದು ಟೀಕಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.