ADVERTISEMENT

ಬಿಸಿಎಂ ವಸತಿ ನಿಲಯ ಉದ್ಘಾಟನೆ

ಸಂಗೊಳ್ಳಿ ರಾಯಣ್ಣ ನಗರ, ರೆವೆನ್ಯೂ ಕಾಲೊನಿಯಲ್ಲಿ ಹೊಸ ಕಟ್ಟಡಗಳು

​ಪ್ರಜಾವಾಣಿ ವಾರ್ತೆ
Published 22 ಜೂನ್ 2022, 2:32 IST
Last Updated 22 ಜೂನ್ 2022, 2:32 IST
ಹುಬ್ಬಳ್ಳಿಯ ವಿಜಯನಗರದ ರೆವೆನ್ಯೂ ಕಾಲೊನಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿನಿಲಯವನ್ನು ಶಾಸಕ ಜಗದೀಶ ಶೆಟ್ಟರ್ ಮಂಗಳವಾರ ಉದ್ಘಾಟಿಸಿದರು. ಹುಡಾ ಅಧ್ಯಕ್ಷ ಅಧ್ಯಕ್ಷ ನಾಗೇಶ ಕಲಬುರ್ಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸರೋಜಾ ಹಳಕಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಲ್ಯಾಣಾಧಿಕಾರಿ ಚಂದ್ರಶೇಖರ ಕರವೀರಮಠ, ಮಹಾನಗರ ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ, ಎಂ.ಬಿ. ಗುಂಡೂರ ಇದ್ದಾರೆ

ಹುಬ್ಬಳ್ಳಿ: ನಗರದ ಭೈರಿದೇವರಕೊಪ್ಪದ ಸಂಗೊಳ್ಳಿ ರಾಯಣ್ಣ ನಗರ ಹಾಗೂ ವಿಜಯನಗರದ ರೆವೆನ್ಯೂ ಕಾಲೊನಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನೂತನ ವಿದ್ಯಾರ್ಥಿನಿಲಯಗಳನ್ನು ಶಾಸಕ ಜಗದೀಶ ಶೆಟ್ಟರ್ ಮಂಗಳವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಸರ್ಕಾರ ನಿರ್ಮಿಸಿರುವ ಹಾಸ್ಟೆಲ್‌ಗಳ ಪ್ರಯೋಜನ ಪಡೆದುಕೊಂಡು ಚೆನ್ನಾಗಿ ಓದಬೇಕು. ಉತ್ತಮ ಭವಿಷ್ಯ ರೂಪಿಸಿಕೊಂಡು ತಂದೆ–ತಾಯಿ, ಗುರುಗಳಿಗೆ ಗೌರವ ತರಬೇಕು. ಆಗ, ಸರ್ಕಾರಿ ಸೌಲಭ್ಯಗಳಿಗೆ ಸಾರ್ಥಕತೆ ಬರಲಿದೆ’ ಎಂದು ಹೇಳಿದರು.

ಹಾಸ್ಟೆಲ್‌ನ ಕೊಠಡಿ ಹಾಗೂ ಭೋಕನಾಲಯ ಪರಿಶೀಲಿಸಿದ ಶೆಟ್ಟರ್, ಸೌಲಭ್ಯಗಳ ಕುರಿತು ವಿದ್ಯಾರ್ಥಿನಿಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಂಗೊಳ್ಳಿ ರಾಯಣ್ಣ ನಗರದಲ್ಲಿ ₹3 ಕೋಟಿ ವೆಚ್ಚದಲ್ಲಿ ಹಾಗೂ ರೆವೆನ್ಯೂ ಕಾಲೊನಿಯಲ್ಲಿ ₹2.75 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿನಿಲಯಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸರೋಜಾ ಹಳಕಟ್ಟಿ, ಇಲಾಖೆಯ ತಾಲ್ಲೂಕು ಕಲ್ಯಾಣಾಧಿಕಾರಿ ಚಂದ್ರಶೇಖರ ಕರವೀರಮಠ, ಮಹಾನಗರ ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ, ಎಂ.ಬಿ. ಗುಂಡೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.