ಜಗಳೂರು: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಮತದಾನ ನಡೆಯಿತು.
ಒಟ್ಟು 351 ಮತದಾರರಲ್ಲಿ 344 ಮತಗಳು ಚಲಾವಣೆಯಾಗಿದ್ದು, ಶೇ 98ರಷ್ಟು ಮತದಾನವಾಗಿದೆ.
ಮತದಾನ ಕೇಂದ್ರಕ್ಕೆ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪತ್ನಿ ಪೂರ್ಣಿಮಾ ಶ್ರೀನಿವಾಸ್ ಭೇಟಿ ನೀಡಿ ಮತದಾನ ಪ್ರಕ್ರಿಯೆ ವೀಕ್ಷಿಸಿದರು.
ಮಾಜಿ ಶಾಸಕರಾದ ಎಸ್.ವಿ.ರಾಮಚಂದ್ರಪ್ಪ, ಎಚ್.ಪಿ.ರಾಜೇಶ್, ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಸಿ.ಮಹೇಶ್, ಕಾಂಗ್ರೆಸ್ ಮುಖಂಡರಾದ ಕೆ.ಪಿ.ಪಾಲಯ್ಯ, ಎಂ.ಡಿ.ಕೀರ್ತಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್, ಬ್ಲಾಕ್ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಬಿ.ಮಹೇಶ್ವರಪ್ಪ ಸೇರಿ ಮುಖಂಡರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತದಾರರಲ್ಲಿ ಮತ ಯಾಚನೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.