ಮೊಳಕಾಲ್ಮೂರು: ತಾಲ್ಲೂಕಿನಾದ್ಯಂತ ಸೋಮವಾರ ರಾತ್ರಿ ಉತ್ತಮ ಮಳೆಯಾಗಿದೆ. ತಡರಾತ್ರಿ ಆರಂಭವಾದ ಮಳೆ ಗುಡುಗು, ಸಿಡಿಲು ಸಹಿತ ಸುರಿಯಿತು.
ಮೊಳಕಾಲ್ಮುರು ಮಳೆಮಾಪನ ಕೇಂದ್ರದಲ್ಲಿ 3.5 ಸೆ.ಮೀ, ರಾಯಾಪುರದಲ್ಲಿ 2 ಸೆಂ.ಮೀ, ದೇವಸಮದ್ರ ಮಳೆಮಾಪನ ಕೇಂದ್ರದಲ್ಲಿ 2.8 ಸೆ.ಮೀ ಮಳೆ ದಾಖಲಾಗಿದೆ.
ಮುಂಗಾರು ಹಂಗಾಮಿನಲ್ಲಿ ತಾಲ್ಲೂಕಿನಾದ್ಯಂತ ಶೇಂಗಾ, ತೊಗರಿ ಬಿತ್ತನೆ ಮಾಡಲಾಗಿದೆ. ಮಳೆ ಬಂದಿರುವುದು ತುಂಬಾ ಅನುಕೂಲವಾಗಿದೆ ಎಂದು ರೈತರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.