ದಾವಣಗೆರೆ: ತಾಲ್ಲೂಕಿನ ಹುಲಿಕಟ್ಟಿ ಗ್ರಾಮದ ಬಳಿ ಸಾರಿಗೆ ಬಸ್ ಪಲ್ಟಿ ಹೊಡೆದು 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್ ದಾವಣಗೆರೆಯಿಂದ ಹಾಲೇಕಲ್ ಗ್ರಾಮಕ್ಕೆ ಸಂಚರಿಸುತ್ತಿತ್ತು.
ಏಕಾಏಕಿ ಕುರಿಗಳು ಅಡ್ಡಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಅಣಜಿ ಆಸ್ಪತ್ರೆ, ಜಿಲ್ಲಾ ಚಿಗಟೇರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.