ADVERTISEMENT

₹ 20.9 ಕೋಟಿ ವೆಚ್ಚದಲ್ಲಿ ತಾಯಿ ಮಕ್ಕಳ ಆಸ್ಪತ್ರೆ: ಬೈರತಿ ಬಸವರಾಜ

​ಪ್ರಜಾವಾಣಿ ವಾರ್ತೆ
Published 4 ಜುಲೈ 2020, 10:18 IST
Last Updated 4 ಜುಲೈ 2020, 10:18 IST
ಬೈರತಿ ಬಸವರಾಜ್‌
ಬೈರತಿ ಬಸವರಾಜ್‌   

ದಾವಣಗೆರೆ: ಇಲ್ಲಿ ₹ 20. 9 ಕೋಟಿ ವೆಚ್ಚದಲ್ಲಿ ಇನ್ನು 15 ತಿಂಗಳುಗಳ ಒಳಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದರು.

ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ 100 ಬೆಡ್‌ಗಳ ನೆಲ ಮತ್ತು ಒಂದು ಮಹಡಿಯ ಆಸ್ಪತ್ರೆಗೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ದಾವಣಗೆರೆಯನ್ನು ಹಸಿರುನಗರವನ್ನಾಗಿ ಮಾಡಲು 6,500 ಗಿಡ ನೆಡುವ ಕಾರ್ಯಕ್ಕೂ ಚಾಲನೆ ನೀಡಲಾಗಿದೆ. ಇದಲ್ಲದೇ ಸ್ಮಾರ್ಟ್‌ಸಿಟಿ ಯೋಜನೆಯಡಿ ₹ 15 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ನಡೆಸಲು ಭೂಮಿ ಪೂಜೆ ಮಾಡಲಾಗಿದೆ ಎಂದು ತಿಳಿಸಿದರು.

ADVERTISEMENT

ಕೊರೊನಾ ನಿಯಂತ್ರಣ ವಿಚಾರದಲ್ಲಿ ಸರ್ಕಾರ ವಿಫಲವಾಗಿಲ್ಲ. ಲಾಕ್‌ಡೌನ್‌ ಸಡಿಲಿಕೆ ಆದ ಮೇಲೆ ಮಹಾರಾಷ್ಟ್ರ, ತಮಿಳುನಾಡು ಸಹಿತ ವಿವಿಧ ರಾಜ್ಯಗಳಲ್ಲಿ ಇದ್ದ ಕನ್ನಡಿಗರು ವಾಪಸ್ಸಾಗಿರುವುದರಿಂದ ಸ್ವಲ್ಪ ಸಮಸ್ಯೆಯಾಗಿದೆ. ಜಿಲ್ಲೆಗೆ ನಾನೂ 16–17 ಬಾರಿ ಭೇಟಿ ನೀಡಿದ್ದೇನೆ. ನಿರ್ಲಕ್ಷ್ಯದಿಂದ ಕೊರೊನಾಕ್ಕೆ ಸಂಬಂಧಿಸಿದಂತೆ ಯಾವುದೇ ಸಾವು ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಆರೋಗ್ಯ ಸಚಿವ ಭೈರತಿ ಬಸವರಾಜ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್.ಎ. ರವೀಂದ್ರನಾಥ್‌, ಪ್ರೊ. ಎನ್‌.ಲಿಂಗಣ್ಣ, ಮಾಡಾಳ್‌ ವಿರೂಪಾಕ್ಷಪ್ಪ ಅವರೂ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.