ADVERTISEMENT

ನಕಲಿ ಜಾತಿ ಪ್ರಮಾಣಪತ್ರ: ರೇಣುಕಾಚಾರ್ಯ ವಿರುದ್ಧ ಕ್ರಮಕ್ಕೆ ಮುಖ್ಯಮಂತ್ರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2022, 4:00 IST
Last Updated 30 ಏಪ್ರಿಲ್ 2022, 4:00 IST
ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಂಡಿರುವ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಂಡಿರುವ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.   

ಜಗಳೂರು: ಬೇಡಜಂಗಮರ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣಪತ್ರ ಪಡೆದ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ಪ್ರೊ. ಕೃಷ್ಣಪ್ಪ ಬಣ) ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪಟ್ಟಣದಲ್ಲಿ ಮನವಿ ಸಲ್ಲಿಸಿದರು.

ಶಾಸಕರು ತಮ್ಮ ಅಧಿಕಾರಿವನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಮಗಳಿಗೆ ಎಸ್‌ಸಿ ಜಾತಿ ಪ್ರಮಾಣಪತ್ರ ಪಡೆದು ಅಕ್ರಮವಾಗಿ ಸೌಲಭ್ಯ ಪಡೆದುಕೊಂಡಿದ್ದಾರೆ. ಕೂಡಲೇ ಅವರನ್ನು ವಜಾ ಮಾಡಿ, ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದರು.

ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಸುಳ್ಳು ಜಾತಿ ನಮೂದಿಸಿ ಪ್ರಮಾಣಪತ್ರ ಪಡೆಯುತ್ತಿರುವವರ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಬೇಕು. ತಾಲ್ಲೂಕಿನ ಪರಿಶಿಷ್ಟ ಸಮುದಾಯದವರು ವಾಸಿಸುವ ಕಾಲೊನಿಗಳಲ್ಲಿ ರಸ್ತೆ, ಚರಂಡಿ ಹಾಗೂ ಗುಡಿಸಲು ನಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ಬಗರ್‌ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ಮನವಿ ಮಾಡಿದರು.

ADVERTISEMENT

ಬಸವರಾಜ ಬೊಮ್ಮಾಯಿ, ‘ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಸಂಘಟನೆಯ ಮುಖಂಡರಾದ ಕುಂದುವಾಡ ಮಂಜುನಾಥ್, ಮಲ್ಲೇಶ್ ಪೂಜಾರಿ, ಕುಬೇಂದ್ರಪ್ಪ, ಲಿಂಗರಾಜ್, ಶಂಭುಲಿಂಗಪ್ಪ, ಪಲ್ಲಾಗಟ್ಟೆ ರಂಗಪ್ಪ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.