ADVERTISEMENT

ಎಲ್ಲ ಕಾಯಿಲೆಗಳಿಗೆ ಚಿಕಿತ್ಸೆ ಆರಂಭ

ಶಾಸಕ ಎಂ.ಪಿ. ರೇಣುಕಾಚಾರ್ಯ ಮಾಹಿತಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 5:11 IST
Last Updated 11 ಜುಲೈ 2021, 5:11 IST
ಹೊನ್ನಾಳಿ ತಾಲ್ಲೂಕಿನ ಸುಂಕದಕಟ್ಟೆ ಲಸಿಕಾ ಕೇಂದ್ರಕ್ಕೆ ಶಾಸಕ ಎಂ.ಪಿ. ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲಿಸಿದರು.
ಹೊನ್ನಾಳಿ ತಾಲ್ಲೂಕಿನ ಸುಂಕದಕಟ್ಟೆ ಲಸಿಕಾ ಕೇಂದ್ರಕ್ಕೆ ಶಾಸಕ ಎಂ.ಪಿ. ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲಿಸಿದರು.   

ಹೊನ್ನಾಳಿ: ಅವಳಿ ತಾಲ್ಲೂಕಿನಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಮೀಸಲಿಟ್ಟ ಹಾಸಿಗೆಯ ಶೇ 75ರಷ್ಟನ್ನು ಕೊರೊನೇತರ ರೋಗಿಗಳಿಗೆ ಮೀಸಲಿಡಲಾಗುವುದು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಹೇಳಿದರು.

ತಾಲ್ಲೂಕಿನ ಸುಂಕದಕಟ್ಟೆ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಲಸಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ 60 ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗಾಗಿಯೇ ಮೀಸಲಿಡಲಾಗಿತ್ತು. ಇದೀಗ ಸೋಂಕಿನ ಪ್ರಮಾಣ ಕಡಿಮೆಯಾದ ಕಾರಣ 13 ಹಾಸಿಗೆಗಳನ್ನು ಮಾತ್ರ ಕೋವಿಡ್‍ ರೋಗಿಗಳಿಗಾಗಿ ಮೀಸಲಿಡಲಾಗುವುದು. ಸೋಮವಾರ
ದಿಂದ ಎಲ್ಲಾ ಕಾಯಿಲೆಗಳಿಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭವಾಗಲಿದೆ ಎಂದು ಹೇಳಿದರು.

ADVERTISEMENT

ತಾಲ್ಲೂಕಿನ ತರಗನಹಳ್ಳಿ, ಸೋಮನಮಲ್ಲಾಪುರ, ಎಚ್. ಗೋಪಗೊಂಡನಹಳ್ಳಿ ಹಾಗೂ ಹೊನ್ನಾಳಿಯಲ್ಲಿರುವ ಅಂಬೇಡ್ಕರ್ ಭವನ ಮತ್ತು ಹಳದಮ್ಮ ದೇವಿ ಪ್ರೌಢಶಾಲೆಯ ಲಸಿಕಾ ಕೇಂದ್ರಗಳಿಗೂ ಶಾಸಕ ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.