ADVERTISEMENT

ಆರೋಪಿಗಳನ್ನು ಹಿಡಿದಾಗಿದೆ, ಮುಂದಿನ ಸವಾಲು ಶಿಕ್ಷೆ ವಿಧಿಸುವುದು: ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 10:06 IST
Last Updated 2 ಸೆಪ್ಟೆಂಬರ್ 2021, 10:06 IST
 ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ    

ದಾವಣಗೆರೆ: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳನ್ನು ನಮ್ಮ ಸಿಬ್ಬಂದಿ ಹಿಡಿದಿದ್ದಾರೆ. ಅವರಿಗೆ ಶಿಕ್ಷೆ ವಿಧಿಸುವುದು ನಮ್ಮ ಮುಂದಿರುವ ಸವಾಲು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, 'ನ್ಯಾಯಾಲಯದಲ್ಲಿ ಸರಿಯಾದ ನಿರ್ವಹಣೆ ನೀಡುವ ಕುರಿತು ಪೊಲೀಸರ ಜತೆ ಚರ್ಚೆ ಮಾಡ್ತೀನಿ, ರಾಜ್ಯದಲ್ಲಿ ಅತ್ಯಾಚಾರ ಪ್ರಕರಣ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುತ್ತೇವೆ. ಅತ್ಯಾಚಾರ ಹಾಗೂ ಮಾದಕ ವಸ್ತುಗಳ ಪ್ರಕರಣದಲ್ಲಿ ಬಿಗಿ ಕ್ರಮ ತೆಗೆದುಕೊಳ್ಳ ಬೇಕಾಗಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.