
ಚನ್ನಗಿರಿ: ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ ಮತದಾನ ಮಾಡಬೇಕು ಎಂದು ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಜಿ. ಮಹಾಲಕ್ಷ್ಮಿ ತಿಳಿಸಿದರು.
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
18 ವರ್ಷ ತುಂಬಿದ ಎಲ್ಲ ಯುವಕ, ಯುವತಿಯರು ಕಡ್ಡಾಯವಾಗಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಪ್ರಜ್ಞಾವಂತ ನಾಗರಿಕರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಮತ, ನಮ್ಮ ಹಕ್ಕು ಎಂದುಕೊಂಡು ಮತದಾನ ಮಾಡಿದರೆ ಭವಿಷ್ಯದ ಉತ್ತಮ ನಾಯಕನನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಎಚ್. ಮೋಹನ್, ಕಾರ್ಯದರ್ಶಿ ಜಿ.ಎಸ್. ಮೋಹನ್, ಪಿಎಸ್‌ಐ ಗುರುಶಾಂತಯ್ಯ, ತಾಲ್ಲೂಕು ಪಂಚಾಯಿತಿ ಇಒ ಎಂ.ಆರ್. ಪ್ರಕಾಶ್, ಕ್ಷೇತ್ರ ಸಮನ್ವಯಾಧಿಕಾರಿ ಎಸ್. ಶಂಕರಪ್ಪ, ಪುರಸಭೆ ಹಿರಿಯ ಆರೋಗ್ಯಾಧಿಕಾರಿ ಶಿವರುದ್ರಪ್ಪ ಉಪಸ್ಥಿತರಿದ್ದರು.
ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ–ಪ್ರಾಧ್ಯಾಪಕ ಜಿ.ಟಿ. ಮಧುಸೂದನ್ ಪ್ರತಿಜ್ಞಾವಿಧಿ ಬೋಧಿಸಿದರು. ತಹಶೀಲ್ದಾರ್ ಎನ್.ಜೆ. ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.