ಹಾವೇರಿ: ಉಕ್ರೇನ್‌ನಲ್ಲಿ ರಷ್ಯಾ ದಾಳಿಯಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಅವರ ಮೃತದೇಹವನ್ನು ದಾವಣಗೆರೆಯ ಶಾಮನೂರು ಶಿವಶಂಕರಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರಕ್ಕೆ ದೇಹ ದಾನ ಮಾಡಲಾಗಿದೆ.
ಕುಟುಂಬದ ಸದಸ್ಯರು ಈ ಹಿಂದೆಯೇ ನವೀನ್ ದೇಹದಾನಕ್ಕೆ ನಿರ್ಧರಿಸಿದ್ದರು. ಅದರಂತೆ, ಇಂದು ಬೆಳಗ್ಗೆ ಮೃತದೇಹ ಚಳಗೇರಿಗೆ ತಲುಪಿದ ಬಳಿಕ ವೀರಶೈವ ಪದ್ಧತಿ ಪ್ರಕಾರ ಪೂಜಾ ಕಾರ್ಯ ನೆರವೇರಿಸಿ ದೇಹದಾನ ಮಾಡಲಾಗಿದೆ. ಸಂಜೆ ಮೃತದೇಹ ಆಸ್ಪತ್ರೆಗೆ ತಲುಪಲಿದೆ.
ಇದಕ್ಕೂ ಮುನ್ನ, ಪೋಷಕರು, ಗ್ರಾಮಸ್ಥರು ಮತ್ತು ನವೀನ್ ಸ್ನೇಹಿತರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದಲ್ಲಿ ಉಕ್ರೇನ್ ಯುದ್ಧದಲ್ಲಿ ಸಾವಿಗೀಡಾದ ನವೀನ ಗ್ಯಾನಗೌಡರ್ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ನಂತರ ನವೀನ್ ಗ್ಯಾನ ಗೌಡರ್ ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಉಕ್ರೇನ್ ನಿಂದ ವಾಪಸಾಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಜತೆ ಮಾತುಕತೆ ನಢಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.