ದಾವಣಗೆರೆ: ಜೂನ್ 4ರಂದು ಪ್ರಕಟಗೊಂಡ ನೀಟ್ ಫಲಿತಾಂಶವನ್ನು ಗಮನಿಸಿದರೆ ಅನೇಕ ಪ್ರಶ್ನೆಗಳು ಮೂಡುತ್ತಿದ್ದು, ಫಲಿತಾಂಶ ಗೊಂದಲದ ಗೂಡಾಗಿದೆ ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ತಿಳಿಸಿದೆ.
ಫಲಿತಾಂಶದಲ್ಲಿ 67 ವಿದ್ಯಾರ್ಥಿಗಳು 720ಕ್ಕೆ 720 ಅಂಕ ಪಡೆದಿದ್ದು, ಈ 67ರಲ್ಲಿ 12 ವಿದ್ಯಾರ್ಥಿಗಳು ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾರೆ. 24 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ ಒಂದೇ ರಾಜ್ಯದ, ಒಂದೇ ಜಿಲ್ಲೆಯ, ಒಂದೇ ಕೇಂದ್ರದಲ್ಲಿ 720 ಅಂಕ ಪಡೆದಿರುವುದು ಅನೇಕ ಪ್ರಶ್ನೆಗಳನ್ನು ಹುಟ್ಟು ಹಾಕಿದೆ ಎಂದು ಒಕ್ಕೂಟದ ಕ್ಯಾಂಪೇನ್ ಕಮಿಟಿಯ ಅಧ್ಯಕ್ಷ ತಹೀರ್ ಸಮೀರ್ ಸಂಶಯ ವ್ಯಕ್ತಪಡಿಸಿದ್ದಾರೆ.
‘ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಕೆಲವು ಟೆಲಿಗ್ರಾಂ ಗ್ರೂಪ್‌ಗಳಲ್ಲಿ ಪರೀಕ್ಷೆಗೂ ಮುನ್ನವೇ ಈ ಸುದ್ದಿ ಹರಿದಾಡಿದೆ. ಅನೇಕ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದು, ಯಾವ ಆಧಾರದ ಮೇಲೆ ಕೊಟ್ಟಿದ್ದಾರೆ ಎಂದು ಸ್ಪಷ್ಟ ಮಾಹಿತಿಯನ್ನು ಸಹ ಎನ್‌ಟಿಎ ನೀಡಿಲ್ಲ ಎಂದು ದೂರಿದ್ದಾರೆ. ಜೂನ್ 14ರಂದು ಹೊರಬರಬೇಕಾಗಿದ್ದ ಫಲಿತಾಂಶವನ್ನು 4ರಂದೇ ಪ್ರಕಟಿಸಿದ್ದು, ಅದೇ ದಿನ ಲೋಕಸಭಾ ಚುನಾವಣಾ ಫಲಿತಾಂಶವಿದ್ದು, ಇದರ ಪ್ರಯುಕ್ತ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಪ್ರಯತ್ನಿಸಿಸಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು’ ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.