ಹೊನ್ನಾಳಿ: ‘ಮುಖ್ಯಮಂತ್ರಿ ಅವರ ಬದಲಾವಣೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ’ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.
ಸದ್ಯ ಸಿಎಂ ಖುರ್ಚಿ ಖಾಲಿ ಇಲ್ಲ. ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ಟರೆ ತಾನೆ ಈ ಎಲ್ಲ ಪ್ರಶ್ನೆ.
ದೆಹಲಿಯಲ್ಲಿ ಎರಡು ದಿನಗಳ
ಕಾಲ ಇದ್ದು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಷಿ ಸೇರಿ ಕೆಲವು ನಾಯಕರನ್ನು ಭೇಟಿ ಮಾಡಿ ಪ್ರಸ್ತುತ
ವಿದ್ಯಾಮಾನಗಳ ಕುರಿತು ಚರ್ಚಿಸಲಾಯಿತು. ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿಸಿದರು.
‘ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ನಾಯಕರ ನಡುವೆ ಏನು ತೀರ್ಮಾನ ಆಗಿದೆಯೋ ನನಗೆ ಗೊತ್ತಿಲ್ಲ. ರಾಷ್ಟ್ರೀಯ ನಾಯಕರು ಏನು ತೀರ್ಮಾನ ಕೈಗೊಳ್ಳುತ್ತಾರೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ’ ಎಂದು ರೇಣುಕಾಚಾರ್ಯ ಹೇಳಿದರು.
ಸಚಿವ ಸ್ಥಾನದ ಆಕಾಂಕ್ಷಿಯಲ್ಲ:‘ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಹಾಗಂತ ನನಗೆ ಸಾಮರ್ಥ್ಯ ಇಲ್ಲ ಎಂದಲ್ಲ. ನನಗೂ ಸಚಿವ ಸ್ಥಾನ ನಿಭಾಯಿಸುವ ಸಾಮರ್ಥ್ಯವಿದೆ. ರಾಷ್ಟ್ರೀಯ ನಾಯಕರು ಏನು ತೀರ್ಮಾನ ಮಾಡುತ್ತಾರೋ ಕಾದು ನೋಡೋಣ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.