ಉಚ್ಚಂಗಿದುರ್ಗ: ಸಮೀಪದ ಕೆರೆ ಗುಡಿಹಳ್ಳಿ ಗ್ರಾಮದ ಹೊರ ವಲಯದಲ್ಲಿ ಕೆಲ ದಿನಗಳಿಂದ ಕರಡಿ ಕಾಣಿಸಿಕೊಳ್ಳುತ್ತಿದ್ದು, ರೈತರಲ್ಲಿ ಆತಂಕ ಮೂಡಿಸಿದೆ.
ಅರಸೀಕೆರೆ ನರಸಪ್ಪನ ಗುಡ್ಡ, ಗುಡಿಹಳ್ಳಿ ಚೌಡಮ್ಮ ದೇವಸ್ಥಾನ, ಕಂಚಿಕೆರೆಯ ಸುತ್ತಮುತ್ತಲೂ ಕರಡಿ ಪ್ರತ್ಯಕ್ಷವಾಗುತ್ತಿರುವುದರಿಂದ ರೈತರು ಒಂಟಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ.
ಸಾರ್ವಜನಿಕರು ಕರಡಿಯನ್ನು ಓಡಿಸಲು ಪ್ರಯತ್ನ ಮಾಡಿದ್ದಾರೆ. ಕರಡಿ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ವಿಷಯ ತಿಳಿದ ಹರಪನಹಳ್ಳಿ ವಲಯದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
‘ಗ್ರಾಮದ ಸುತ್ತಮುತ್ತ ಕರಡಿ ಕಾಣಿಸಿಕೊಂಡಿರುವುದರಿಂದ ರೈತರಲ್ಲಿ ಆತಂಕ ಸೃಷ್ಟಿಯಾಗಿದೆ. ಕರಡಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಗುಡಿಹಳ್ಳಿ ಹಾಲೇಶ್ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.