ADVERTISEMENT

ಕುರಿಗಾಹಿಯ ಮೇಲೆ ಕರಡಿಗಳ ದಾಳಿ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 2:58 IST
Last Updated 17 ಸೆಪ್ಟೆಂಬರ್ 2021, 2:58 IST
ಜಗಳೂರು ತಾಲ್ಲೂಕಿನ ಅಣಬೂರು ಗೊಲ್ಲರಹಟ್ಟಿ ಗ್ರಾಮದ ಕುರಿಗಾಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.
ಜಗಳೂರು ತಾಲ್ಲೂಕಿನ ಅಣಬೂರು ಗೊಲ್ಲರಹಟ್ಟಿ ಗ್ರಾಮದ ಕುರಿಗಾಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.   

ಜಗಳೂರು: ತಾಲ್ಲೂಕಿನ ಅಣಬೂರು ಗೊಲ್ಲರಹಟ್ಟಿ ಗ್ರಾಮದ ಕುರಿಗಾಹಿಯೊಬ್ಬರು ಕರಡಿಗಳ ದಾಳಿಯಿಂದ ಬುಧವಾರ ಗಾಯಗೊಂಡಿದ್ದಾರೆ.

ಅಣಬೂರು ಗೊಲ್ಲರಹಟ್ಟಿ ಗ್ರಾಮದ ಕುರಿಗಾಹಿ ಅಜ್ಜಪ್ಪ (47) ಗಾಯಗೊಂಡವರು. ರಾತ್ರಿ ಎಂಟು ಗಂಟೆ ವೇಳೆಗೆ ಗ್ರಾಮದಿಂದ ಹೊರವಲಯದ ಕುರಿಹಟ್ಟಿಗೆ ತೆರಳುವಾಗ ಮೂರು ಕರಡಿಗಳು ಏಕಾಏಕಿ ದಾಳಿ ನಡೆಸಿವೆ. ಕುರಿಗಾಹಿಯ ಎದೆ, ಕೈಕಾಲು, ತಲೆಯ ಭಾಗಗಳಿಗೆ ಗಾಯವಾಗಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ಗ್ರಾಮದಲ್ಲಿ ತಿಂಗಳ ಹಿಂದೆ ವ್ಯಕ್ತಿಯೊಬ್ಬರ ಮೇಲೆ ಕರಡಿಗಳು ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದವು. ಆದರೂ ಅರಣ್ಯ ಇಲಾಖೆ ಕರಡಿಗಳ ದಾಳಿ ತಡೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕರಡಿಗಳ ಉಪಟಳಕ್ಕೆ ಕಡಿವಾಣ ಹಾಕಬೇಕು. ಗಾಯಕ್ಕೊಳಗಾದವರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಯಾದವ ಸಮಾಜದ ಮುಖಂಡ ಸಮಾಜದ ಮಹಾಲಿಂಗಪ್ಪ ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.