ADVERTISEMENT

ಸಾಲದ ಹೊರೆ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 15:56 IST
Last Updated 22 ಅಕ್ಟೋಬರ್ 2024, 15:56 IST

ಹೊನ್ನಾಳಿ: ತಾಲ್ಲೂಕಿನ ಕತ್ತಿಗೆ ಗ್ರಾಮದ ರೈತ ರವಿಕುಮಾರ್ (42) ಅವರು ಸಾಲದ ಹೊರೆಯಿಂದಾಗಿ ಅ.21ರಂದು ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಪಿಐ ಸುನಿಲ್‍ಕುಮಾರ್ ತಿಳಿಸಿದ್ದಾರೆ.

ರವಿಕುಮಾರ್ ಅವರು ಬೇರೆಯವರ ಜಮೀನನ್ನು ಕೇಣಿಗೆ ಪಡೆದು ಕೃಷಿ ಕೆಲಸ ಮಾಡುತ್ತಿದ್ದರು. ಮೂರು ವರ್ಷಗಳಿಂದ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಸರಿಯಾಗಿ ಬೆಳೆ ಬಾರದೆ, ಸಂಪಾದನೆಯೂ ಇಲ್ಲದೆ ಕೃಷಿಗಾಗಿ ಮಾಡಿದ್ದ ಸಾಲ ತೀರಿಸಲು ಮನೆಯನ್ನು ಅಡವಿಟ್ಟಿದ್ದರು ಎಂದು ತಿಳಿಸಿದರು.

ಐಡಿಎಫ್‍ಸಿ ಬ್ಯಾಂಕ್‌ನಲ್ಲಿ ಸಾಲ ಪಡೆದಿದ್ದ ಅವರಿಗೆ ಅ. 19ರಂದು ಐಡಿಎಫ್‍ಸಿ ಬ್ಯಾಂಕ್‌ನಿಂದ ಅಂತಿಮ ನೋಟಿಸ್ ಬಂದಿತ್ತು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.

ADVERTISEMENT

ರವಿಕುಮಾರ್ ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.