ADVERTISEMENT

ಚರಂಡಿ ಸ್ವಚ್ಛಗೊಳಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2025, 16:02 IST
Last Updated 28 ಮಾರ್ಚ್ 2025, 16:02 IST
ನ್ಯಾಮತಿ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ಚರಂಡಿಗಳು ಕಸ– ಕಡ್ಡಿ, ಮಣ್ಣಿನಿಂದ ತುಂಬಿದ್ದು, ಶುಕ್ರವಾರ ನಿವಾಸಿಗಳು ಸ್ವಚ್ಛತೆಗೆ ಮುಂದಾಗಿರುವುದು 
ನ್ಯಾಮತಿ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ಚರಂಡಿಗಳು ಕಸ– ಕಡ್ಡಿ, ಮಣ್ಣಿನಿಂದ ತುಂಬಿದ್ದು, ಶುಕ್ರವಾರ ನಿವಾಸಿಗಳು ಸ್ವಚ್ಛತೆಗೆ ಮುಂದಾಗಿರುವುದು    

ನ್ಯಾಮತಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 11ನೇ ವಾರ್ಡ್‌ನ ಅಂಬೇಡ್ಕರ್ ನಗರದಲ್ಲಿರುವ ಚರಂಡಿಗಳು ಕಸ, ಕಡ್ಡಿ, ಮಣ್ಣಿನಿಂದ ತುಂಬಿ ನೀರು ಸರಾಗವಾಗಿ ಹರಿಯದೆ ಕೆಟ್ಟ ವಾಸನೆ ಬೀರುತ್ತಿದೆ ಎಂದು ನಿವಾಸಿಗಳು ದೂರಿದ್ದಾರೆ.

ರಸ್ತೆ ವಿಸ್ತರಣೆ ಕಾಮಗಾರಿ ಈಚೆಗೆ ನಡೆದು ಮುಕ್ತಾಯವಾಗಿದೆ. ಆ ವೇಳೆ ಚರಂಡಿಗಳಲ್ಲಿ ಮಣ್ಣು ತುಂಬಿ ಕೊಳಚೆ ನೀರು ಸರಿಯಾಗಿ ಹರಿಯಲು ಆಗದೆ ನಿಂತಿದೆ. ಇದರಿಂದ ಕೆಟ್ಟ ವಾಸನೆ ಬರುವುದರ ಜೊತೆಗೆ ಸಾಂಕ್ರಾಮಿಕ ರೋಗಗಳ ಉಗಮಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಈ ಬಗ್ಗೆ ಸಂಬಂಧಪಟ್ಟ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೂ ಮತ್ತು ಶಾಸಕ ಡಿ.ಜಿ.ಶಾಂತನಗೌಡ ಅವರಿಗೂ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ. ಸಂಬಂಧಪಟ್ಟವರು ಗಮನಹರಿಸದಿದ್ದರೆ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.