ADVERTISEMENT

ಮಲೇಬೆನ್ನೂರು ಪುರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ

​ಪ್ರಜಾವಾಣಿ ವಾರ್ತೆ
Published 6 ಜುಲೈ 2025, 5:58 IST
Last Updated 6 ಜುಲೈ 2025, 5:58 IST
<div class="paragraphs"><p>ಮಲೇಬೆನ್ನೂರು ಪುರಸಭೆ ಅಧ್ಯಕ್ಷರ ವಿರುದ್ಧ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸುವ ಗೊತ್ತುವಳಿ ಪತ್ರವನ್ನು ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಅವರಿಗೆ ಶುಕ್ರವಾರ ನೀಡಿದರು</p></div>

ಮಲೇಬೆನ್ನೂರು ಪುರಸಭೆ ಅಧ್ಯಕ್ಷರ ವಿರುದ್ಧ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸುವ ಗೊತ್ತುವಳಿ ಪತ್ರವನ್ನು ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಅವರಿಗೆ ಶುಕ್ರವಾರ ನೀಡಿದರು

   

ಮಲೇಬೆನ್ನೂರು: ಪಟ್ಟಣದ ಪುರಸಭಾ ಅಧ್ಯಕ್ಷರ ವಿರುದ್ಧ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸುವ ಗೊತ್ತುವಳಿ ಪತ್ರವನ್ನು ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಅವರಿಗೆ ಶುಕ್ರವಾರ ನೀಡಿದ್ದಾರೆ. 

ಅಧ್ಯಕ್ಷ ಬಿ. ಹನುಮಂತಪ್ಪನವರು ಸಾರ್ವಜನಿಕ ಅಭಿವೃದ್ಧಿ ಕಾರ್ಯ ಕೆಲಸಕ್ಕೆ ಸಹಕರಿಸುತ್ತಿಲ್ಲ. ಕಚೇರಿ ಆಡಳಿತಾತ್ಮಕ ಕೆಲಸ, ಕಾಮಗಾರಿ ನಿರ್ವಹಣೆ ಕುಂಠಿತವಾಗಿವೆ. ಪುರಸಭೆ ಸದಸ್ಯರ ವಿರುದ್ಧ ಸಾಮಾನ್ಯ ಸಭೆಯಲ್ಲಿಯೇ ದರ್ಪ ತೋರಿ ಏಕವಚನ ಪ್ರಯೋಗಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

ADVERTISEMENT

ಪುರಸಭೆ 17 ಸದಸ್ಯರು ಸಹಿ ಮಾಡಿ ಅವಿಶ್ವಾಸ ನಿರ್ಣಯ ಮಂಡನೆಗೆ ಸಭೆ ಕರೆಯಲು ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.