ADVERTISEMENT

ಮಧ್ಯಂತರ ಚುನಾವಣೆ ಅಂದರೆ ಶಾಸಕರು ಓಡುತ್ತಾರೆ

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಆರ್‌. ಶ್ರೀನಿವಾಸ್

​ಪ್ರಜಾವಾಣಿ ವಾರ್ತೆ
Published 27 ಜೂನ್ 2019, 16:36 IST
Last Updated 27 ಜೂನ್ 2019, 16:36 IST

ದಾವಣಗೆರೆ: ಮಧ್ಯಂತರ ಚುನಾವಣೆ ಯಾವ ಪಕ್ಷ ಶಾಸಕರಿಗೂ ಇಷ್ಟವಿಲ್ಲ. ಚುನಾವಣೆ ಅಂದ ತಕ್ಷಣ ಎಲ್ಲರೂ ಓಡಿ ಹೋಗಿ ಬಿಡುತ್ತಾರೆ. ಚುನಾವಣೆ ಬಗ್ಗೆ ಮುಖಂಡರು ಸುಮ್ಮನೆ ಹೇಳಿಕೆಯನ್ನಷ್ಟೇ ನೀಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಆರ್‌. ಶ್ರೀನಿವಾಸ್‌ ಹೇಳಿದರು.

ಮಧ್ಯಂತರ ಚುನಾವಣೆ ಬಗ್ಗೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ನೀಡಿದ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು. ‘ಈ ಸರ್ಕಾರ ಇನ್ನೂ ನಾಲ್ಕು ವರ್ಷ ಇರಬೇಕು ಎಂಬುದು ಎಲ್ಲ ಶಾಸಕರ ಅನಿಸಿಕೆ. ನೀವು ಬೇಕಾದರೆ ವೈಯಕ್ತಿಕವಾಗಿ ಸಂಪರ್ಕಿಸಿ ಕೇಳಿ ನೋಡಿ. ಚುನಾವಣೆ ಎದುರಿಸುವ ಕಷ್ಟ ಯಾರಿಗೂ ಬೇಡ’ ಎಂದು ಅಭಿಪ್ರಾಯಪಟ್ಟರು.

ಪರಿಶಿಷ್ಟ ಪಂಗಡಕ್ಕೆ ಶೇ 7.5 ಮೀಸಲಾತಿ ನೀಡಬೇಕು ಎಂದು ವಾಲ್ಮೀಕಿ ಸಮಾಜದ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ‘ರಾಜನಹಳ್ಳಿಯಿಂದ ರಾಜಧಾನಿಗೆ’ ಪಾದಯಾತ್ರೆ ವೇಳೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ ಬಗ್ಗೆ ಬಳಸಿರುವ ಪದಗಳು ಉದ್ವೇಗದಲ್ಲಿ ಹೇಳಿರಬಹುದು. ಇದರಲ್ಲಿ ಯಾವುದೇ ಜಾತಿ ಸಂಘರ್ಷಕ್ಕೆ ಕಾರಣವಾಗುವ ಅಂಶಗಳು ಇಲ್ಲ ಎಂದು ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.