
ನ್ಯಾಮತಿ: ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡುವ ಗುರಿ ಹೊಂದಿರಬೇಕು ಎಂದು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ವಂದನಾ ಹೇಳಿದರು.
ಪಟ್ಟಣದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಗುರುವಾರ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಸಂಸ್ಕಾರವಂತರಾಗಿ, ಗುರು–ಹಿರಿಯರು ಹಾಗೂ ಪೋಷಕರನ್ನು ಗೌರವಿಸುವ ಮನೋಭಾವ ಬೆಳಸಿಕೊಳ್ಳಬೇಕು. ಸಮಾಜಮುಖಿ ಜೀವನ ನಡೆಸಬೇಕು ಎಂದು ಹಾರೈಸಿದರು.
ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಾಧಕರು ಮತ್ತು ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.