ADVERTISEMENT

ತೀರ್ಥರಾಮೇಶ್ವರದಲ್ಲಿ ಮುಂದಿನ ಗ್ಯಾರಂಟಿ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2025, 4:49 IST
Last Updated 9 ಆಗಸ್ಟ್ 2025, 4:49 IST
ನ್ಯಾಮತಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಘಟಕದ ಸಭೆ ಜಿ. ಶಿವರಾಮನಾಯ್ಕ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು
ನ್ಯಾಮತಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಘಟಕದ ಸಭೆ ಜಿ. ಶಿವರಾಮನಾಯ್ಕ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು   

ನ್ಯಾಮತಿ: ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಪ್ರಗತಿ ಬಗ್ಗೆ ಚರ್ಚಿಸಲು ಸೆ.8ರಂದು ಬೆಳಗುತ್ತಿ ಹೋಬಳಿಯ ತೀರ್ಥರಾಮೇಶ್ವರ ಪುಣ್ಯಕ್ಷೇತ್ರದಲ್ಲಿ ಸಭೆ ನಡೆಸಲಾಗುವುದು ಎಂದು ಅನುಷ್ಠಾನ ಸಮಿತಿಯ ಅಧ್ಯಕ್ಷ ಜಿ. ಶಿವರಾಮನಾಯ್ಕ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಘಟಕದ ಸಭೆಯಲ್ಲಿ ಮಾತನಾಡಿದರು.

ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ಎಲ್ಲ ನ್ಯಾಯಬೆಲೆ ಅಂಗಡಿಗಳ ಮಾಲೀಕರು ಸಭೆಯಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ.ರಾಘವೇಂದ್ರ ಅವರಿಗೆ ಸೂಚನೆ ನೀಡಿದರು.

ADVERTISEMENT

ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಚೇರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ಅನುಷ್ಠಾನ ಸಮಿತಿ ಸದಸ್ಯರಾದ ನೇತ್ರಾವತಿ, ಆಶಾ, ಕೆ.ಆರ್.ವಸಂತನಾಯ್ಕ, ಮಲ್ಲೇಶಪ್ಪ, ಎಸ್.ಬಿ.ಜಯಪ್ಪ, ಕೆ.ಚೇತನ್, ಎಸ್.ಕೆ. ತೀರ್ಥಲಿಂಗಪ್ಪ, ಎ.ಜಿ.ಶಿವನಗೌಡ, ಎಸ್.ಆರ್.ರಮೇಶ್  ಪಾಲ್ಗೊಂಡಿದ್ದರು.

ಸಹಾಯಕ ಲೆಕ್ಕಾಧಿಕಾರಿ ಮಹಮದ್‌ ರಫಿ, ಸಿಬ್ಬಂದಿ ಎನ್.ಅನುಷಾ, ಎಸ್.ಆರ್.ರಮೇಶ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.