ADVERTISEMENT

ನ್ಯಾಮತಿ | ಸ್ವ-ಸಹಾಯ ಸಂಘಗಳಿಂದ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 13 ಮೇ 2025, 16:02 IST
Last Updated 13 ಮೇ 2025, 16:02 IST

ನ್ಯಾಮತಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ಕಾಮಗಾರಿಗಳನ್ನು  ಹಮ್ಮಿಕೊಳ್ಳಲು ಸರ್ಕಾರೇತರ ಸಂಸ್ಥೆ, ಸ್ವ-ಸಹಾಯ ಸಂಘಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಗಣೇಶರಾವ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪಟ್ಟಣದಲ್ಲಿ ಘನತ್ಯಾಜ್ಯ, ಪಾರಂಪರಿಕ ತ್ಯಾಜ್ಯ, ಸಿ ಮತ್ತು ಡಿ ತ್ಯಾಜ್ಯ ನಿರ್ವಹಣೆ, ಸ್ವಚ್ಛ-ಸರ್ವೇಕ್ಷಣಾ, ನಗರವನ್ನು ಸ್ವಚ್ಛವಾಗಿ ಇರಿಸಿಕೊಳ್ಳುವುದೂ ಸೇರಿದಂತೆ ಮನೆ-ಮನೆಗೂ ಭೇಟಿ ನೀಡಿ ಸಾರ್ವಜನಿಕರನ್ನು ಉತ್ತೇಜಿಸಲು ಎನ್‌ಜಿಒ ಮತ್ತು ಸ್ವಸಹಾಯ ಸಂಘಗಳ ಸದಸ್ಯರನ್ನು ನೇಮಕ ಮಾಡಿಕೊಳ್ಳಲಾಗುವುದು. ಆಸಕ್ತರು ಮೂರು ದಿನದೊಳಗಾಗಿ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಆರೋಗ್ಯ ಶಾಖೆಯನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.