ಮಾದಾಪುರ (ನ್ಯಾಮತಿ): ತಾಲ್ಲೂಕಿನ ಸವಳಂಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಾಪುರವನ್ನು ‘ಜಲಜೀವನ್ ಮಿಷನ್’ ಅಡಿ ನಿರಂತರ ಕುಡಿಯುವ ನೀರು ಸರಬರಾಜು ಗ್ರಾಮವನ್ನಾಗಿ ಶಾಸಕ ಡಿ.ಜಿ.ಶಾಂತನಗೌಡ ಗುರುವಾರ ಘೋಷಿಸಿದರು.
ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಜೀವನ್ ಮಿಷನ್, ಸುಸ್ಥಿರ ಕುಡಿಯುವ ನೀರು ಸರಬರಾಜು ಯೋಜನೆ ಜಂಟಿಯಾಗಿ ಗ್ರಾಮದಲ್ಲಿ ಆಯೋಜಿಸಿದ್ದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮಾದಾಪುರ ಗ್ರಾಮದಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ನಿರಂತರ ನೀರು ಸರಬರಾಜು ಆರಂಭಿಸಿದ್ದು ಎಲ್ಲರ ಸಹಕಾರ ಅಗತ್ಯ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಜಿ. ಗಿರೀಶ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಪಂಚಾಯಿತಿ ಯೋಜನಾಧಿಕಾರಿ ಮಲ್ಲನಾಯ್ಕ, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ವಿ.ರಾಘವೇಂದ್ರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಸೋಮ್ಲನಾಯ್ಕ, ಜಗದೀಶ, ವಿಶ್ವಬ್ಯಾಂಕ್ ತಂಡದ ನಂದಕುಮಾರ, ಸಮಿತಿ ಅಧ್ಯಕ್ಷೆ ನೇತ್ರಾವತಿ, ಆರ್‌ಡಿಪಿಆರ್‌ನ ಎಂ.ಜೆ.ಆಶಾ, ಸದಸ್ಯರಾದ ಗಾಯತ್ರಿ, ನಾಗರಾಜನಾಯ್ಕ, ರುದ್ರೇಶಪ್ಪ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಜಿ.ವೇದಾವತಿ, ಕಾರ್ಯದರ್ಶಿ ಅಂಜುನಾಯ್ಕ, ಲೆಕ್ಕ ಸಹಾಯಕ ಬಸವರಾಜಪ್ಪ, ಗಣಕಯಂತ್ರ ನಿರ್ವಾಹಕ ಬಿ.ಎಲ್.ಮಂಜುನಾಥ ಮತ್ತು ಸಿಬ್ಬಂದಿ, ಮಹಿಳಾ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.