ADVERTISEMENT

ಬಾಲ್ಯ ವಿವಾಹಕ್ಕೆ ಅಧಿಕಾರಿಗಳ ತಡೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2020, 15:56 IST
Last Updated 17 ಡಿಸೆಂಬರ್ 2020, 15:56 IST

ದಾವಣಗೆರೆ: ತಾಲ್ಲೂಕಿನ ಹದಡಿ ಪೊಲೀಸ್ ಠಾಣೆಯ ವ್ಯಾಪ್ತಿಯ ಗ್ರಾಮವೊಂದರಲ್ಲಿ ಬಾಲ್ಯ ವಿವಾಹಕ್ಕೆಸಿದ್ಧತೆ ನಡೆದಿದ್ದು, ಅಧಿಕಾರಿಗಳು ತಡೆದಿದ್ದಾರೆ.

ಗ್ರಾಮದಕುಟುಂಬವೊಂದರ ಅಣ್ಣ–ತಮ್ಮರೊಂದಿಗೆ ಅದೇ ಗ್ರಾಮದ ಅಕ್ಕ–ತಂಗಿಯರ ಮದುವೆ ನಡೆಸಲು ಸಿದ್ಧತೆ ನಡೆದಿತ್ತು. ಈ ಕುರಿತು ಮಕ್ಕಳಸಹಾಯವಾಣಿಗೆ ದೂರು ಬಂದಿತ್ತು.

ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಬಾಲಕಿಯಮನೆಗೆ ಹೋಗಿ ಬಾಲಕಿಯ ಶಾಲಾ ದಾಖಲೆಯನ್ನು ಪರಿಶೀಲಿಸಿದರು.
ಬಾಲ್ಯ ವಿವಾಹ ನಿಷೇಧ ಕಾಯ್ದೆ ಪ್ರಕಾರ ಬಾಲ್ಯ ವಿವಾಹ ಮಾಡಿದರೆ ₹ 1 ಲಕ್ಷ ದಂಡ, ಒಂದು ವರ್ಷಕ್ಕೆ ಕಡಿಮೆಯಿಲ್ಲದಂತೆ ಎರಡು ವರ್ಷಕ್ಕೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯಾಗಲಿದೆ ಎಂದು ಪೋಷಕರಿಗೆ ಎಚ್ಚರಿಕೆ ನೀಡಿದರು. ಪೋಷಕರಿಂದ ಮುಚ್ಚಳಿಕೆ ಬರೆಯಿಸಿಕೊಂಡರು.

ADVERTISEMENT

ಕಾರ್ಯಾಚರಣೆಯಲ್ಲಿ ಮಕ್ಕಳ ಸಹಾಯವಾಣಿ ಕೊಲ್ಯಾಬ್ ಡಾನ್ ಬಾಸ್ಕೊ ತಂಡದ ಸಂಯೋಜಕ ಕೊಟ್ರೇಶ್ ಟಿ.ಎಂ., ಮಕ್ಕಳ ಸಹಾಯವಾಣಿ ಕಾರ್ಯರ್ತ ಹರ್ಷದ್ ಅಲಿ‌ ಟಿ.ಎ‌., ಪಿಡಿಒ ಲಕ್ಷ್ಮಿದೇವಿ, ಶಿಶು ಅಭಿವೃದ್ಧಿ ಯೋಜನೆಯ ಹಿರಿಯ ಮೇಲ್ವಿಚಾರಕಿ ಮೈತ್ರಾದೇವಿ, ಮೇಲ್ವಿಚಾರಕರಾದ ಸುಮಂಗಲ, ಹದಡಿ ಪೊಲೀಸ್‌ ಠಾಣೆಯ ಎಸ್‌ಐ ಚನ್ನವೀರಪ್ಪ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಹಾಲೇಶ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.