ADVERTISEMENT

ಶಾಪಿಂಗ್‌ ಮಾಲ್‌ಗೆ ಅಧಿಕಾರಿಗಳ ಭೇಟಿ

ಕೋವಿಡ್‌ ಮಾರ್ಗಸೂಚಿ ಪಾಲನೆ ಪರಿಶೀಲಿಸಿದ ತಂಡ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 16:19 IST
Last Updated 6 ನವೆಂಬರ್ 2020, 16:19 IST
ದಾವಣಗೆರೆಯ ಹದಡಿ ರಸ್ತೆಯಲ್ಲಿನ ಶಾಪಿಂಗ್ ಮಾಲ್‌ಗೆ ಶುಕ್ರವಾರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ನೀಡಿತು
ದಾವಣಗೆರೆಯ ಹದಡಿ ರಸ್ತೆಯಲ್ಲಿನ ಶಾಪಿಂಗ್ ಮಾಲ್‌ಗೆ ಶುಕ್ರವಾರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ನೀಡಿತು   

ದಾವಣಗೆರೆ: ನಗರದಹದಡಿ ರಸ್ತೆಯಲ್ಲಿನ ಶಾಪಿಂಗ್ ಮಾಲ್ ಹಾಗೂ ಅಂಗಡಿಗಳಿಗೆ ಶುಕ್ರವಾರ ದಿಢೀರ್‌ ಭೇಟಿ ನೀಡಿದ ‌ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ ಹಾಗೂ ಅಧಿಕಾರಿಗಳ ತಂಡ ಕೋವಿಡ್‌ ಮಾರ್ಗಸೂಚಿ ಅನುಸರಿಸುತ್ತಿರುವ ಸಂಬಂಧ ಪರಿಶೀಲನೆ ನಡೆಸಿತು.

ಅಂಗಡಿ ಹಾಗೂ ಮಾಲ್‌ಗಳಲ್ಲಿಸಾರ್ವಜನಿಕರಿಗೆ ಸ್ಯಾನಿಟೈಸರ್ ನೀಡುತ್ತಿರುವ ಬಗ್ಗೆ, ಸಿಬ್ಬಂದಿ ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸಿರುವುದು ಹಾಗೂ ಅಂತರ ಕಾಪಾಡಿಕೊಳ್ಳಲಾಗುತ್ತಿದೆಯೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲಿಸಿದರು.

ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿರುವ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದ ಆಯುಕ್ತರು ಪಾಸ್ಟಿಕ್‌ ಅನ್ನು ವಶಪಡಿಸಿಕೊಂಡು ದಂಡ ವಿಧಿಸಿದರು.ಕೋವಿ‌ಡ್‌ ಮಾರ್ಗಸೂಚಿಗಳನ್ನು ಅನುಸರಿಸದಿದ್ದಲ್ಲಿ ಅಂಗಡಿ ಹಾಗೂ ಮಾಲ್‌ಗಳನ್ನು ಮುಚ್ಚಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ADVERTISEMENT

ಆರೋಗ್ಯಾಧಿಕಾರಿಗಳು, ಕಂದಾಯಾಧಿಕಾರಿಗಳು, ಆರೋಗ್ಯ ನಿರೀಕ್ಷಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.