ADVERTISEMENT

ಚನ್ನಗಿರಿ: ಕೃಷಿ ಹೊಂಡಕ್ಕೆ ಜಾರಿ ಬಿದ್ದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2023, 4:28 IST
Last Updated 20 ಡಿಸೆಂಬರ್ 2023, 4:28 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಚನ್ನಗಿರಿ: ತಾಲ್ಲೂಕು ನಲ್ಲೂರು ಗ್ರಾಮದಲ್ಲಿ ಅಡಿಕೆ ತೋಟದಲ್ಲಿ ಇರುವ ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಅದೇ ಗ್ರಾಮದ ಜಿ.ಎನ್.ಮಹೇಶ್ವರಪ್ಪ (73) ಮೃತ ವ್ಯಕ್ತಿ. ಅವರು ತಮ್ಮ ತೋಟದಲ್ಲಿ ಕೆಲಸ ಮಾಡಲು ಹೋಗುವಾಗ ಕೃಷಿ ಹೊಂಡದಲ್ಲಿ ಆಯತಪ್ಪಿ ಬಿದ್ದಿದ್ದಾರೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.