ADVERTISEMENT

ದಾವಣಗೆರೆ ಸ್ಮಾರ್ಟ್‌ಸಿಟಿ ಕಚೇರಿ ಕಟ್ಟಡ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 5:27 IST
Last Updated 22 ಏಪ್ರಿಲ್ 2021, 5:27 IST
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಪಕ್ಕದಲ್ಲಿ ಸ್ಮಾರ್ಟ್‌ಸಿಟಿ ಕಚೇರಿಯ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಅವರು ಉದ್ಘಾಟಿಸಿದರು
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಪಕ್ಕದಲ್ಲಿ ಸ್ಮಾರ್ಟ್‌ಸಿಟಿ ಕಚೇರಿಯ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಅವರು ಉದ್ಘಾಟಿಸಿದರು   

ದಾವಣಗೆರೆ: ದಾವಣಗೆರೆ ಜಿಲ್ಲಾಡಳಿತ ಭವನದ ಪಕ್ಕದಲ್ಲಿ ₹ 15.85 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸ್ಮಾರ್ಟ್‌ಸಿಟಿ ಕಚೇರಿ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಬುಧವಾರ ಉದ್ಘಾಟಿಸಿದರು.

ಸ್ಮಾರ್ಟ್‌ಸಿಟಿ ಕಚೇರಿ ಇದುವರೆಗೂ ಖಾಸಗಿ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಕಟ್ಟಡದ ನೆಲಮಹಡಿ ಸಿದ್ಧಗೊಂಡಿರುವ ಕಾರಣ ಕಚೇರಿಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಇದರಿಂದ ಬಾಡಿಗೆ ಮೊತ್ತ ಸರ್ಕಾರಕ್ಕೆ ಉಳಿತಾಯವಾಗಲಿದೆ. ಕಟ್ಟಡ ಸಂಪೂರ್ಣಗೊಂಡ ಬಳಿಕ, ಮುಖ್ಯಮಂತ್ರಿಗಳನ್ನು ಆಹ್ವಾನಿಸಿ, ಇನ್ನೊಮ್ಮೆ ಪೂರ್ಣ ಪ್ರಮಾಣದಲ್ಲಿ ಉದ್ಘಾಟನೆ ಸಮಾರಂಭ ಏರ್ಪಡಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಸ್ಮಾರ್ಟ್‌ಸಿಟಿ ಯೋಜನೆಯಡಿ ಅಗ್ನಿಶಾಮಕದಳಕ್ಕೆ 1 ಕೋಟಿ ವೆಚ್ಚದಲ್ಲಿ ಆಧುನಿಕ ಅಗ್ನಿಶಾಮಕ ವಾಹನ ಹಾಗೂ ಪೂರಕ ಉಪಕರಣಗಳನ್ನು ನೀಡಲಾಗಿದೆ ಎಂದರು.

ADVERTISEMENT

ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್, ಧೂಡಾ ಅಧ್ಯಕ್ಷ ಎನ್.ಎಚ್. ಶಿವಕುಮಾರ್, ಮೇಯರ್ ಎಸ್.ಟಿ. ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಸ್ಮಾರ್ಟ್‌ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಪಾಲಿಕೆ ಸದಸ್ಯೆ ಉಮಾ ಪ್ರಕಾಶ್‌, ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.