ADVERTISEMENT

‘ಮನೆ ಬಾಗಿಲಿಗೆ ಪಾಲಿಕೆಗೆ ಉತ್ತಮ ಪ‍್ರತಿಕ್ರಿಯೆ’

ಮಹಾನಗರ ಪಾಲಿಕೆ ಮೇಯರ್ ಬಿ.ಜಿ.ಅಜಯ್‌ಕುಮಾರ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2020, 3:41 IST
Last Updated 21 ಡಿಸೆಂಬರ್ 2020, 3:41 IST
ದಾವಣಗೆರೆಯ 18ನೇ ವಾರ್ಡ್‌ನ ಕಾಯಿಪೇಟೆಯಲ್ಲಿ ಭಾನುವಾರ ‘ಮನೆಯ ಬಾಗಿಲಿಗೆ ಮಹಾನಗರ ಪಾಲಿಕೆ’ ಕಾರ್ಯಕ್ರಮದಲ್ಲಿ ಮೇಯರ್ ಬಿ.ಜಿ.ಅಜಯ್‌ಕುಮಾರ್ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿದರು.
ದಾವಣಗೆರೆಯ 18ನೇ ವಾರ್ಡ್‌ನ ಕಾಯಿಪೇಟೆಯಲ್ಲಿ ಭಾನುವಾರ ‘ಮನೆಯ ಬಾಗಿಲಿಗೆ ಮಹಾನಗರ ಪಾಲಿಕೆ’ ಕಾರ್ಯಕ್ರಮದಲ್ಲಿ ಮೇಯರ್ ಬಿ.ಜಿ.ಅಜಯ್‌ಕುಮಾರ್ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿದರು.   

ದಾವಣಗೆರೆ:ನಗರದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಡೆಸುತ್ತಿರುವ ‘ಮನೆಯ ಬಾಗಿಲಿಗೆ ಮಹಾನಗರ ಪಾಲಿಕೆ’ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮೇಯರ್ ಬಿ.ಜಿ.ಅಜಯ್‌ಕುಮಾರ್ ಹೇಳಿದರು.

18ನೇ ವಾರ್ಡ್‌ನ ಕಾಯಿಪೇಟೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ‘ಕಾರ್ಯಕ್ರಮ ಯಶಸ್ವಿ
ಯಾಗಿ ನಡೆದಿದ್ದು, ಆಸ್ತಿ ತೆರಿಗೆ ಮತ್ತು ನೀರಿನ ದರದಿಂದ ₹ 4,30,468 ಸಂಗ್ರಹವಾಗಿದೆ. 26 ಉದ್ದಿಮೆಗಳಿಗೆ ಪರವಾನಗಿ ನೀಡಿದ್ದು, ಇದರಿಂದ ₹ 58,225 ಸಂಗ್ರಹವಾಗಿದೆ’ ಎಂದರು.

‘ಕಟ್ಟಡ ಪರವಾನಗಿ, ಬೀದಿ ದೀಪ, ಎಂಜಿನಿಯರಿಂಗ್ ಶಾಖೆಗೆ ಮತ್ತು ಇತರೆ ದೂರುಗಳಿಗೆ ಸಂಬಂಧಿಸಿದಂತೆ ಹಲವು ಅರ್ಜಿಗಳು ಬಂದಿದ್ದು, ಸೂಕ್ತ ದಾಖಲಾತಿಗಳನ್ನು ಪಡೆದು ಸ್ಥಳದಲ್ಲಿಯೇ ಕೆಲಸ ಮಾಡಿಕೊಡಲಾಗುತ್ತಿದೆ. ವಾರದಲ್ಲಿ ಮೂರು ದಿನ ನಿಗದಿಪಡಿಸಿದ ವಾರ್ಡ್‌ಗಳಿಗೆ ಭೇಟಿ ನೀಡುತ್ತಿದ್ದು, ಆಯಾ ವಾರ್ಡ್‍ನ ಸ್ಥಳೀಯರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದ್ದೇವೆ’ ಎಂದು ಅವರು ತಿಳಿಸಿದರು.

ADVERTISEMENT

18ನೇ ವಾರ್ಡ್‍ನ ಸದಸ್ಯ ಸೋಗಿ ಶಾಂತ್‍ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.