ADVERTISEMENT

ಜಗಳೂರು ಪ.ಪಂ ಚುನಾವಣೆ ಇಂದು

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2020, 19:30 IST
Last Updated 8 ನವೆಂಬರ್ 2020, 19:30 IST
ಜಗಳೂರು ಪಟ್ಟಣ ಪಂಚಾಯಿತಿ ಕಚೇರಿ
ಜಗಳೂರು ಪಟ್ಟಣ ಪಂಚಾಯಿತಿ ಕಚೇರಿ   

ಜಗಳೂರು:‌ಎರಡು ವರ್ಷಗಳ ನಂತರ ಪಟ್ಟಣ ಪಂಚಾಯಿತಿಗೆ ನ. 9ರಂದು ನಡೆಯುತ್ತಿರುವ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಯಾರಿಗೆ ಒಲಿಯಲಿದೆ ಎನ್ನುವುದು ಕುತೂಹಲ ಕೆರಳಿಸಿದೆ.

ಒಟ್ಟ 18 ಸ್ಥಾನಗಳ ಪೈಕಿ ಬಿಜೆಪಿ 11, ಕಾಂಗ್ರೆಸ್ 5 ಹಾಗೂ ಜೆಡಿಎಸ್ 2 ಸದಸ್ಯರನ್ನು ಹೊಂದಿದ್ದು, ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾಗಿದೆ.

ಸತತ 3ನೇ ಬಾರಿ ಗೆದ್ದಿರುವ ಬಿಜೆಪಿಯ ಆರ್. ತಿಪ್ಪೇಸ್ವಾಮಿ ಹಾಗೂ ಲಲಿತಮ್ಮ ಶಿವಣ್ಣ, ಪಾಪಲಿಂಗಪ್ಪ ಮತ್ತು ರೇವಣ್ಣ ಅವರು ಅಧ್ಯಕ್ಷಗಾದಿಯ ಪ್ರಬಲ ಸ್ಪರ್ಧಿಗಳಾಗಿದ್ದಾರೆ.

ADVERTISEMENT

ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಎದುರಾಗಿದ್ದು, ಶಾಸಕ ಎಸ್.ವಿ. ರಾಮಚಂದ್ರ ಅವರ ತೀರ್ಮಾನವೇ ಅಂತಿಮವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.