ADVERTISEMENT

ಕಾಡಾವನ್ನು ಮಾದರಿಯಾಗಿಸಲು ಯೋಜನೆ: ಪವಿತ್ರಾ ರಾಮಯ್ಯ ಭರವಸೆ

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2020, 1:45 IST
Last Updated 29 ನವೆಂಬರ್ 2020, 1:45 IST
ದಾವಣಗೆರೆ ತಾಲ್ಲೂಕಿನ ಬಾಡ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ನೀರು ಬಳಕೆದಾರರ ಸಹಕಾರ ಸಂಘಗಳ ಪುನಶ್ಚೇತನ ಆಂದೋಲನ ಕಾರ್ಯಕ್ರಮದಲ್ಲಿ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಮಾತನಾಡಿದರು.
ದಾವಣಗೆರೆ ತಾಲ್ಲೂಕಿನ ಬಾಡ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ನೀರು ಬಳಕೆದಾರರ ಸಹಕಾರ ಸಂಘಗಳ ಪುನಶ್ಚೇತನ ಆಂದೋಲನ ಕಾರ್ಯಕ್ರಮದಲ್ಲಿ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಮಾತನಾಡಿದರು.   

ದಾವಣಗೆರೆ: ಕಾಡಾವನ್ನು ಮಾದರಿ ಪ್ರಾಧಿಕಾರವನ್ನಾಗಿ ಮಾಡಲು ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದ್ದು, ಹಂತ–ಹಂತವಾಗಿ ಜಾರಿಗೊಳಿಸುವುದಾಗಿಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭರವಸೆ ನೀಡಿದರು.

ನೀರು ಬಳಕೆದಾರರ ಸಹಕಾರ ಸಂಘ, ಜಲ ನೆಲ ನಿರ್ವಹಣಾ ಸಂಸ್ಥೆ (ವಾಲ್ಮಿ) ಆಶ್ರಯದಲ್ಲಿ ತಾಲ್ಲೂಕಿನ ಬಾಡ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ನೀರು ಬಳಕೆದಾರರ ಸಹಕಾರ ಸಂಘಗಳ ಪುನಶ್ಚೇತನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

‘ಸರ್ಕಾರ ರೈತರ ಹಿತ ಕಾಪಾಡಲು ಅಧಿಕಾರ ನೀಡಿದ್ದು, ಅವರ ಬದುಕು ಭವಿಷ್ಯವಾಗಿರುವ ರೈತರ ಜಮೀನಿಗೆ ಸಮರ್ಪಕವಾಗಿ ನೀರು ಹರಿಸಲು ಕಾಡಾ ಯೋಜನೆ ರೂಪಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಸರ್ಕಾರ ಈಗಾಗಲೇ ₹5 ಕೋಟಿ ಅನುದಾನ ನೀಡಿದ್ದು, ಇನ್ನೂ ₹ 25 ಕೋಟಿ ಬಿಡುಗಡೆ ಮಾಡುವ ಭರವಸೆ ಸಿಕ್ಕಿದೆ’ ಎಂದು ವಿವರಿಸಿದರು.

ADVERTISEMENT

‘ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಎಲ್ಲ ಕಾಲುವೆಗಳ ದುರಸ್ತಿ ಮಾಡುವ ಜೊತೆಗೆ ನೀರು ನಿರ್ವಹಣೆಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸುವ ಮೂಲಕ ರೈತರ ಹಿತ ಕಾಪಾಡಲು ಬದ್ಧವಾಗಿದ್ದೇನೆ. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದರು.

ವಾಲ್ಮಿ ನಿರ್ದೇಶಕ ಡಾ. ರಾಜೇಂದ್ರ ಪೊದ್ದಾರ, ದಾವಣಗೆರೆ ವಿವಿ ಪ್ರಾಧ್ಯಾಪಕ ಡಾ. ಶಿವಕುಮಾರ ಕಣಸೋಗಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಶೈಲಜಾ, ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷ ಜಿ.ಆರ್. ಪ್ರಭಾಕರ್, ಜಿ.ಕೆ.ಅಣ್ಣಪ್ಪ, ಡಿ.ರವಿ, ಜಿ.ಎಸ್. ಹನುಮಂತಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.