ADVERTISEMENT

ವಿಷಪೂರಿತ ಆಹಾರ ಸೇವನೆ: 50 ಮಂದಿ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2019, 10:00 IST
Last Updated 3 ನವೆಂಬರ್ 2019, 10:00 IST

ದಾವಣಗೆರೆ: ತಾಲ್ಲೂಕಿನ ಬಟ್ಲಕಟ್ಟೆ ಗ್ರಾಮದಲ್ಲಿ ನಡೆದ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ವಿಷಪೂರಿತ ಆಹಾರ ಸೇವಿಸಿದ್ದ 50 ಮಂದಿ ಶನಿವಾರ ಅಸ್ವಸ್ಥಗೊಂಡಿದ್ದಾರೆ.

ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಟಿ.ಎಸ್‌. ನಿಂಗರಾಜು ಅವರ ಪುತ್ರಿಯ ನಿಶ್ಚಿತಾರ್ಥ ನಡೆಯುತ್ತಿತ್ತು. ಆ ವೇಳೆ ಮೂರನೇ ಪಂಕ್ತಿಯಲ್ಲಿ ಆಹಾರ ಸೇವಿಸಿದವರಿಗೆ ಶನಿವಾರ ಬೆಳಿಗ್ಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಕೆಲವರಿಗೆ ಹದಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ 20 ಮಂದಿಯನ್ನು ಚಿಗಟೇರಿ ಜಿಲ್ಲಾ ಆಸ್ಪತ್ರೆ ದಾಖಲಿಸಲಾಗಿದೆ. ಇವರ ಪೈಕಿ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾ ಸಾಂಕ್ರಾಮಿಕ ರೋಗ ನಿಯಂತ್ರಣ ವೈದ್ಯಾಧಿಕಾರಿ ಡಾ.ಯತೀಶ್ ತಿಳಿಸಿದ್ದಾರೆ.

‘ಕೋಸಂಬರಿ ತಿಂದು ಅಸ್ವಸ್ಥರಾಗಿರಬಹುದು ಎಂಬ ಶಂಕಿಸಲಾಗಿದೆ. ಊಟ ಸೇವಿಸಿದ ಎಲ್ಲರಿಗೂ ಒಆರ್‌ಎಸ್ ಹಾಗೂ ಮಾತ್ರೆಗಳನ್ನು ನೀಡಿದ್ದೇವೆ. ಮುನ್ನೆಚ್ಚರಿಕೆ ಕ್ರಮವಾಗಿ ಹದಡಿ ಅಂಗನವಾಡಿ ಕೇಂದ್ರದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆದಿದ್ದೇವೆ. ಆಹಾರ, ಲಾಡು ಹಾಗೂ ರೋಗಿಗಳ ಮಲದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದೇವೆ’ ಎಂದು ಡಾ. ಯತೀಶ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.