
ಸಚಿವ ಸತೀಶ ಜಾರಕಿಹೊಳಿ
ಹರಿಹರ (ದಾವಣಗೆರೆ): ಅಧಿಕಾರ ಹಂಚಿಕೆಯ ವಿಚಾರವಾಗಿ ತಲೆದೋರಿರುವ ಗೊಂದಲ ಯಾವಾಗ ಬಗೆಹರಿಯಬಹುದು ಎಂದು ನಾನು ಕೂಡ ಕಾಯುತ್ತಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಇಲ್ಲಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ಅಧಿಕಾರ ಹಂಚಿಕೆ ವಿಚಾರವಾಗಿ ನಿರ್ಮಾಣವಾದ ಗೊಂದಲ ಶೀಘ್ರ ಬಗೆಹರಿಯುವ ನಿರೀಕ್ಷೆ ಇತ್ತು. ಈ ವಿಚಾರದಲ್ಲಿ ಏಕೆ ವಿಳಂಬವಾಗುತ್ತಿದೆ ಎಂಬುದು ಗೊತ್ತಿಲ್ಲ. ಈವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕು. ಅಲ್ಲಿಯವರೆಗೆ ಕಾಯುವುದು ಅನಿವಾರ್ಯ’ ಎಂದರು.
‘ಕಾಂಗ್ರಸ್ ಶಾಸಕರು ಒಗ್ಗಟ್ಟಿನಿಂದ ಇದ್ದೇವೆ. ಸಮರ್ಥರಿಗೆ, ಪಕ್ಷವನ್ನು ಮುನ್ನಡೆಸುವ ಶಕ್ತಿ ಇರುವವರಿಗೆ ಅವಕಾಶ ಸಿಗಲಿದೆ. ಸಚಿವ ಸಂಪುಟ ವಿಸ್ತರಣೆಗೆ ಕೂಡ ಹೈಕಮಾಂಡ್ ಒಪ್ಪಿಗೆ ಸಿಗಬೇಕಿದೆ. ಗೊಂದಲಗಳು ಶೀಘ್ರ ಬಗೆಹರಿದು ಪಕ್ಷವನ್ನು ಬಲಪಡಿಸುವ ಅಗತ್ಯವಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.