ADVERTISEMENT

ವಿದ್ಯುತ್ ದರ ಏರಿಕೆ : ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2020, 14:00 IST
Last Updated 18 ನವೆಂಬರ್ 2020, 14:00 IST
ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ದಾವಣಗೆರೆ ಬೆಸ್ಕಾಂ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಯಿತು
ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ದಾವಣಗೆರೆ ಬೆಸ್ಕಾಂ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಯಿತು   

ದಾವಣಗೆರೆ: ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಅಂಬೇಡ್ಕರ್ ವೃತ್ತದಲ್ಲಿನ ಬೆಸ್ಕಾಂ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಯಿತು.

ಒಂದು ವರ್ಷದಿಂದ ಕೊರೊನಾ ಮಹಾಮಾರಿಯ ಹೊಡೆತಕ್ಕೆ ಸಿಲುಕಿ ಇಡೀ ದೇಶವೇ ತಲ್ಲಣಗೊಂಡಿದೆ. ತೀವ್ರ ಆರ್ಥಿಕ ಕುಸಿತ, ನಿರುದ್ಯೋಗ, ರೈತರಿಗೆ ಸಂಕಷ್ಟ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ’ ಎಂದು ಪ್ರತಿಭಟನಕಾರರು ಟೀಕಿಸಿದರು.

ಬಿಜೆಪಿ ಸರ್ಕಾರವು ರಾಜ್ಯದಲ್ಲಿನ ಎಲ್ಲ ವಿದ್ಯುತ್ ಕಂಪನಿಗಳ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 40 ಪೈಸೆ ಹೆಚ್ಚಳ ಮಾಡಿರುವುದು. ಕೋವಿಡ್ ಸಂಕಷ್ಟದ ಸಮಯದಲ್ಲಿ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರತಿಯೊಂದು ದಿನಬಳಕೆ ಮತ್ತು ಇತರೇ ಜೀವನಾವಶ್ಯಕ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡುತ್ತಿರುವ ಸರ್ಕಾರ ಜನರಿಗೆ ಅಘಾತ ಉಂಟು ಮಾಡುತ್ತಿದೆ ಎಂದು ಆರೋಪಿಸಿದರು.

ADVERTISEMENT

ರಾಜ್ಯ ಸರ್ಕಾರ ವಿದ್ಯುತ್‌ದರ ಏಕರೆ ಮಾಡಿರುವ ಆದೇಶವನ್ನು ತಕ್ಷಣದಿಂದಲೇ ಹಿಂಪಡೆಯಬೇಕು. ಇಲ್ಲವಾದರೆ ಹೋರಾಟ ನಿರಂತರವಾಗಿರುತ್ತದೆ ಎಂದು ಎಚ್ಚರಿಸಿದರು.

ಕಾಂಗ್ರೆಸ್‌ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ. ಶೆಟ್ಟಿ, ಕೆಪಿಸಿಸಿ ವಕ್ತಾರ ಡಿ. ಬಸವರಾಜ್‌, ಕಾಂಗ್ರೆಸ್‌ ಮುಖಂಡರಾದ ಎ.ನಾಗರಾಜ್‌, ಕೆ.ಎಚ್‌. ಓಬಳಪ್ಪ, ಅಯೂಬ್ ಪೈಲ್ವಾನ್‌, ಅನಿತಾಬಾಯಿ ಮಾಲತೇಶ್‌, ಸುಷ್ಮಾಪಾಟೀಲ್‌, ಶುಭಮಂಗಳಾ, ಕೆ.ಜಿ. ಶಿವಕುಮಾರ್‌ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.